ರಾಜ್ಯಸಿದ್ದರಾಮಯ್ಯ ಪಟ್ಟಾಭಿಷೇಕಕ್ಕೆ ಹೈಕಮಾಂಡ್ ಸಮ್ಮತಿ, ಕಂಠೀರವ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆ: ವರದಿಗಳು
ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯ ಹೆಸರನ್ನು ಅಧಿಕೃತವಾಗಿ ಘೋಷಿಸುವ ಮುನ್ನವೇ ಸಿದ್ದರಾಮಯ್ಯ ಬೆಂಬಲಿಗರು ಸಂಭ್ರಮಾಚರಣೆ ಆರಂಭಿಸಿದ್ದು, ಬೆಂಗಳೂರಿನಲ್ಲಿರುವ ಅವರ ನಿವಾಸದ ಮುಂದೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.