ರಾಜ್ಯಆಸೆ, ಆಮಿಷಗಳಿಗೆ ಒಳಗಾಗದೇ ಮತ ಹಕ್ಕು ಚಲಾಯಿಸಿ: ಮತದಾರರಿಗೆ ಸಿದ್ದಗಂಗಾ ಶ್ರೀ
ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಬಹಳಷ್ಟು ಮಹತ್ವ ಇದೆ. ನಮ್ಮದೇ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುವಂತಹ ವ್ಯವಸ್ಥೆ. ನಮ್ಮ ಸಂವಿಧಾನ ಕೊಟ್ಟಿರುವ ಹಕ್ಕನ್ನು ಪ್ರತಿಯೊಬ್ಬರು ಕೂಡ ಚಲಾವಣೆ ಮಾಡಬೇಕು ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿಗಳು ಬುಧವಾರ ಹೇಳಿದ್ದಾರೆ.