ವಾಣಿಜ್ಯಹೋಟೆಲ್, ರೆಸ್ಟೋರೆಂಟ್ ಗಳು ಬಿಲ್ ನಲ್ಲಿ ಸೇವಾ ಶುಲ್ಕ ಸೇರಿಸುವಂತಿಲ್ಲ: ಸಿಸಿಪಿಎ ಆದೇಶ
ಹೋಟೆಲ್, ರೆಸ್ಟೋರೆಂಟ್ ಗಳು ಬಿಲ್ ನಲ್ಲಿ ಸ್ವಯಂಚಾಲಿತವಾಗಿ ಸೇವಾ ಶುಲ್ಕ ವಿಧಿಸದಂತೆ ಕೇಂದ್ರೀಯ ಗ್ರಾಹಕರ ರಕ್ಷಣಾ ಪ್ರಾಧಿಕಾರ ಸೋಮವಾರ ಆದೇಶ ಹೊರಡಿಸಿದೆ. ಒಂದು ವೇಳೆ ಈ ಆದೇಶ ಉಲ್ಲಂಘನೆಯಾದಲ್ಲಿ ಗ್ರಾಹಕರು ದೂರು ದಾಖಲಿಸಲು ಅವಕಾಶ ನೀಡಿದೆ.