ದೇಶಚೀನಾ ಸೇರಿ ಕೆಲವು ದೇಶಗಳಲ್ಲಿ ಕೋವಿಡ್ ಉಲ್ಭಣ: ಕೇಂದ್ರ ಸರ್ಕಾರಕ್ಕೆ ಸೀರಮ್ ಇನ್ಸ್ಟಿಟ್ಯೂಟ್ ನಿಂದ 2 ಕೋಟಿ ಡೋಸ್ ಉಚಿತ ಕೋವಿಶೀಲ್ಡ್ ಪೂರೈಕೆ
ಚೀನಾ, ಜಪಾನ್, ಅಮೆರಿಕ ಸೇರದಂತೆ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಮುಂಜಾಗ್ರತಾ ಕ್ರಮವಾಗಿ ಎರಡು ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಕೇಂದ್ರ ಸರ್ಕಾರಕ್ಕೆ ಉಚಿತವಾಗಿ ನೀಡುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.