ಬಾಲಿವುಡ್ಸುಕೇಶ್ ಚಂದ್ರಶೇಖರ್ ಪ್ರಕರಣ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೊತ್ತಿದ್ದೂ ಭಾಗಿಯಾಗಿದ್ದಾರೆ; ಕೋರ್ಟ್ ಗೆ ಇಡಿ ಹೇಳಿಕೆ
200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್, ವಂಚಕ ಸುಕೇಶ್ ಚಂದ್ರಶೇಖರ್ ಅವರ ಅಪರಾಧದ ಆದಾಯವನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಮತ್ತು ಬಳಸಿಕೊಳ್ಳುವಲ್ಲಿ ಉದ್ದೇಶಪೂರ್ವಕವಾಗಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಹೈಕೋರ್ಟ್ ಗೆ ಹೇಳಿಕೆ ನೀಡಿದೆ.