ರಾಜ್ಯರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ: ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚನೆಗೆ ಸರ್ಕಾರ ನಿರ್ಧಾರ
ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತು ಇತರೆ ಸೌಲಭ್ಯಗಳ ವಿಸ್ತರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ.