ರಾಜ್ಯಗಡಿ ವಿವಾದ: ಸುಪ್ರೀಂ ನಲ್ಲಿ ನಾಳೆ ವಿಚಾರಣೆ, ರಾಜ್ಯದ ಪರ ಸಮರ್ಥ ವಾದ ನಡೆಸುವ ಭರವಸೆಯಿದೆ- ಸಿಎಂ ಬೊಮ್ಮಾಯಿ
ಕರ್ನಾಟಕ - ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದ್ದು, ಈ ಕುರಿತು ಹಿರಿಯ ವಕೀಲ ಮುಕುಲ್ ರೋಹಟಗಿ, ಕರ್ನಾಟಕದ ಪರವಾಗಿ ಸಮರ್ಥವಾಗಿ ವಾದ ಮಾಡುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.