ರಾಜ್ಯಬೆಳಗಾವಿ ಗಡಿ ವಿವಾದ: ಇದೇ 23ಕ್ಕೆ 'ಸುಪ್ರೀಂ'ನಲ್ಲಿ ವಿಚಾರಣೆ, ಸರ್ವಪಕ್ಷ ಸಭೆ ಕರೆಯಲು ಸಿದ್ದರಾಮಯ್ಯ ಒತ್ತಾಯ
ಬೆಳಗಾವಿ ಗಡಿ ವಿವಾದದ ಬಗ್ಗೆ ಮಹಾರಾಷ್ಟ್ರ ಸರ್ಕಾರ ವಿಶೇಷ ಆಸಕ್ತಿ ತೋರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ತಕ್ಷಣ ಸರ್ವಪಕ್ಷಗಳ ಸಭೆ ಕರೆದು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.