ರಾಜ್ಯಡಿ.12ಕ್ಕೆ ಬೆಳಗಾವಿಯಲ್ಲಿ ಸುವರ್ಣ ಸಂಭ್ರಮ, ಸಾಂಸ್ಕೃತಿಕ ವೈಭವ ಕಾರ್ಯಕ್ರಮ!
ರಾಜ್ಯಕ್ಕೆ ‘ಕರ್ನಾಟಕ’ ಎಂದು ಮರುನಾಮಕರಣಗೊಂಡು 50 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವಿಧಾನಮಂಡಲದ ವತಿಯಿಂದ ಡಿ.12ರಂದು ಸಂಜೆ 6 ಗಂಟೆಗೆ ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಬಳಿ ‘ಸುವರ್ಣ ಸಂಭ್ರಮ’ ಸಾಂಸ್ಕೃತಿಕ ವೈಭವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸ್ಪೀಕರ್ ಯು.ಟಿ.ಖಾದರ್ ಅವರು ಶುಕ್ರವಾರ ಹೇಳಿದರು.