ಸೆಲ್ಫೀ

ಆನೆಯೊಂದಿಗೆ selfie ತೆಗೆಯಲು ಹೋಗಿ ಜೀವ ಕಳೆದುಕೊಂಡ ಉದ್ಯಮಿ; ಕನಕಪುರ ವನ್ಯಜೀವಿ ಅಭಯಾರಣ್ಯದಲ್ಲಿ ದುರಂತ..!
ಸೋಮವಾರ ಮುಂಜಾನೆ ಸುಮಾರು 1.30ರ ವೇಳೆಗೆ ಕನಕಪುರ ವನ್ಯಜೀವಿ ಅಭಯಾರಣ್ಯದ ಬಸವನಬೆಟ್ಟ ಸಮೀಪ, ಕರಬಗೆರೆ ಕೆರೆಯ ಬಳಿ ಈ ಘಟನೆ ನಡೆದಿದೆ.

ಸಫಾರಿ ವೇಳೆ ಸೆಲ್ಫೀ, ಮೊಬೈಲ್ ಬಳಕೆಗೆ ನಿಷೇಧ: ವನ್ಯಜೀವಿಗಳ ರಕ್ಷಣೆಗಾಗಿ ಅರಣ್ಯ ಇಲಾಖೆ ಹೊಸ ನಿಯಮ..!
ಸಫಾರಿ ಪ್ರದೇಶಗಳಲ್ಲಿ ಮೊಬೈಲ್ ಬಳಕೆಯಿಂದ ವನ್ಯಜೀವಿಗಳಿಗೆ ಅಡ್ಡಿಯುಂಟು ಮಾಡುವುದು ಹಾಗೂ ಪ್ರವಾಸಿಗರ ನಡುವೆ ಅನಾವಶ್ಯಕ ಗದ್ದಲ ಉಂಟಾಗುವುದನ್ನು ತಡೆಯುವುದು ಈ ನಿಯಮದ ಉದ್ದೇಶವಾಗಿದೆ.

ಜನಾರ್ದನ ರೆಡ್ಡಿ ಮಾಡೆಲ್ ಹೌಸ್‌ಗೆ ಬೆಂಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ರೀಲ್ಸ್ ಮಾಡಲು ಹೋಗಿ ಬೆಂಕಿ ಹಚ್ಚಿದ್ರಾ ಹುಡುಗರು..?
ಬಳ್ಳಾರಿಯ ಕೌಲ್‌ಬಜಾರ್ ಪ್ರದೇಶದ ನಿವಾಸಿಗಳಾದ 8 ಜನರನ್ನು ವಶಕ್ಕೆ ಪಡೆಯಲಾಗಿದ್ದು, ಸಾಮಾಜಿಕ ಜಾಲತಾಣಗಳಿಗಾಗಿ ರೀಲ್ಸ್ ಮಾಡುತ್ತಿರುವ ವೇಳೆ ಅಜಾಗರೂಕತೆಯಿಂದ ಅಥವಾ ದುರುದ್ದೇಶದಿಂದ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.

ಬಂಡೀಪುರ: ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಮುಂದಾದ ಪ್ರವಾಸಿಗನ ಅಟ್ಟಾಡಿಸಿದ ಕಾಡಾನೆ; Video
ಬಂಡೀಪುರ ಹುಲಿ ಅಭಯಾರಣ್ಯದಲ್ಲಿ ಕೇರಳದ ಪ್ರವಾಸಿಗನೊಬ್ಬನ ಮೇಲೆ ಕಾಡು ಆನೆ ದಾಳಿ ನಡೆಸಿದೆ.

ಪ್ರಧಾನಿ ಮೋದಿ ಜೊತೆ ಸೆಲ್ಫೀ: ಒಳ್ಳೆಯ ಸ್ನೇಹಿತ ಎಂದು ಪೋಸ್ಟ್ ಮಾಡಿದ ಇಟಲಿ ಪ್ರಧಾನಿ ಮೆಲೋನಿ
ಸಿಓಪಿ 28 ಶೃಂಗಸಭೆಗೆ ದುಬೈಗೆ ಭೇಟಿ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.

ಅಪ್ಪು ಜೊತೆಗಿನ ಕೊನೆ ಸೆಲ್ಫೀ ಹಂಚಿಕೊಂಡ ರಾಘವೇಂದ್ರ ರಾಜ್‌ಕುಮಾರ್!
ನಟ ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನಗಲಿ ಇಂದಿಗೆ 5 ದಿನಗಳು ಕಳೆದಿದ್ದು, ಕುಟುಂಬ ಸದಸ್ಯನನ್ನು ಕಳೆದುಕೊಂಡ ಹಿನ್ನೆಲೆಯಲ್ಲಿ ದೊಡ್ಮನೆಯಲ್ಲಿ ನೀರವ ಮೌನ ಆವರಿಸಿದೆ. ಈ ನಡುವಲ್ಲೇ ರಾಘವೇಂದ್ರ ರಾಜ್ ಕುಮಾರ್ ಅವರು ಅಪ್ಪು ಜೊತೆಗಿನ ಅಪರೂಪದ ನೆನಪೊಂದನ್ನು ಹಂಚಿಕೊಂಡಿದ್ದಾರೆ.

ಸೆಲ್ಫೀ ಕ್ರೇಜ್: ಟ್ರ್ಯಾಕ್ಟರ್ ಜೊತೆಗೇ ಬಾವಿಗೆ ಬಿದ್ದು 20 ವರ್ಷದ ಯುವಕ ಸಾವು!
ಟ್ರ್ಯಾಕ್ಟರ್ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಬಾವಿಗೆ ಬಿದ್ದು 20 ವರ್ಷದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ತಿರುಪಥೂರ್ ಜಿಲ್ಲೆಯ ವನಿಯಂಬಾಡಿ ಎಂಬ ಗ್ರಾಮದಲ್ಲಿ ನಡೆದಿದೆ.

ಜನತಾ ಕರ್ಫ್ಯೂಗೆ ಅಭೂತಪೂರ್ವ ಬೆಂಬಲ: ಬಿಕೋ ಎನ್ನುತ್ತಿದ್ದ ರಸ್ತೆಗಳು, ಸ್ಮಾರಕಗಳ ಮುಂದೆ ಸೆಲ್ಫೀ ತೆಗೆದುಕೊಂಡ ಜನತೆ
ಕೊರೋನಾ ವೈರಸ್'ನ್ನು ಮಟ್ಟ ಹಾಕಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರೆ ನೀಡಿದ್ದ ಜನತಾ ಕರ್ಫ್ಯೂಗೆ ರಾಜ್ಯದಾದ್ಯಂತ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ಸದಾಕಾಲ ಜನರಿಂದ ಗಿಜುಗುಡುತ್ತಿದ್ದ ಮೈಸೂರಿನ ಬಹುತೇಕ ರಸ್ತೆಗಳು ಹಾಗೂ ಸ್ಮಾರಕಗಳು ಭಾನುವಾರ ಬಿಕೋ ಎನ್ನುತ್ತಿದ್ದವು.

ತೆಲಂಗಾಣ: ನಿವೃತ್ತ ಪೊಲೀಸ್ ಅಧಿಕಾರಿ ಕೊಂದು, ಸೆಲ್ಫೀ ತೆಗದುಕೊಂಡ ಆರೋಪಿ!
ನಿವೃತ್ತ ಪೊಲೀಸ ಅಧಿಕಾರಿಯನ್ನು ಹತ್ಯೆಗೈದು, ಮೃತದೇಹದ ಮುಂದೆ ನಿಂತು ಆರೋಪಿಯೊಬ್ಬ ಸೆಲ್ಫೀ ಕ್ಲಿಕ್ಕಿಸಿಕೊಂಡಿರುವ ಘಟನೆ ತೆಲಂಗಾಣ ರಾಜ್ಯದಲ್ಲಿ ನಡೆದಿದೆ.

