ದೇಶಸೇನಾ ಕ್ಯಾಂಟೀನ್ ಗಳಲ್ಲಿ ಕೇವಲ ಸ್ವದೇಶಿ ಉತ್ಪನ್ನಗಳ ಮಾರಾಟದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ: ಕೇಂದ್ರ ಸರ್ಕಾರ
ದೇಶಾದ್ಯಂತ ನಡೆಸಲಾಗುತ್ತಿರುವ ಸೇನಾ ಕ್ಯಾಂಟೀನ್ ಗಳಲ್ಲಿ ಕೇವಲ ಸ್ವದೇಶಿ ಉತ್ಪನ್ನಗಳ ಮಾರಾಟದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸರ್ಕಾರ ಶನಿವಾರ ಹೇಳಿದೆ. ಈ ಸಂಬಂಧ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ರಕ್ಷಣಾ ಖಾತೆ ಸಹಾಯಕ ಸಚಿವ ಶ್ರೀಪಾದ್ ನಾಯಕ್ ರಾಜ್ಯಸಭೆಯಲ್ಲಿ ಹೇಳಿದರು.