ಸೇರ್ಪಡೆ

ಶಿವಸೇನೆ(ಯುಬಿಟಿ) ಗೆ ಭಾರಿ ಹೊಡೆತ! ಏಕನಾಥ್ ಶಿಂಧೆ ಬಣಕ್ಕೆ ಸಂಸದ ಓಂಪ್ರಕಾಶ್ ನಿಂಬಾಳ್ಕರ್ ಸೇರ್ಪಡೆ ನಿಶ್ಚಿತ!
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಶಿವಸೇನೆ (ಯುಬಿಟಿ) ಸೋಲು ಮತ್ತು ವಿರೋಧ ಪಕ್ಷದಲ್ಲಿರುವುದರಿಂದ ಜನರಿಗೆ ಏನು ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದರು.

ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆ: ಪದ್ಮಶ್ರೀ ಪುರಸ್ಕೃತ ಜಿತೇಂದರ್ ಸಿಂಗ್ ಶುಂಟಿ AAP ಗೆ ಸೇರ್ಪಡೆ
ಶಹೀದ್ ಭಗತ್ ಸಿಂಗ್ (SBS) ಫೌಂಡೇಶನ್‌ನ ಅಧ್ಯಕ್ಷರಾದ ಶುಂಟಿ ಅವರು COVID-19 ಸಾಂಕ್ರಾಮಿಕ ಸಮಯದಲ್ಲಿ ಮಾನವೀಯ ಕಾರ್ಯಗಳಿಂದಾಗಿ ಜನಪ್ರಿಯತೆ ಗಳಿಸಿದ್ದರು.

ನವದೆಹಲಿ: ತಮಿಳುನಾಡು ಕಾಂಗ್ರೆಸ್ ಶಾಸಕಿ ವಿಜಯಧರಣಿ ಬಿಜೆಪಿಗೆ ಸೇರ್ಪಡೆ
ತಮಿಳುನಾಡಿನ ಕಾಂಗ್ರೆಸ್ ಶಾಸಕಿ ವಿಜಯಧರಣಿ ಶನಿವಾರ ಇಲ್ಲಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಕನ್ನಿಯಕುಮಾರಿ ಜಿಲ್ಲೆಯ ವಿಲವಂಕೋಡ್‌ನಿಂದ ಮೂರು ಬಾರಿ ಶಾಸಕರಾಗಿದ್ದ ವಿಜಯಧರಣಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ರಾಜ್ಯ ಸಚಿವ ಎಲ್. ಮುರುಗನ್ ಅವರ ಸಮ್ಮುಖದಲ್ಲಿ ಕೇಸರಿ ಪಕ್ಷ ಸೇರಿದರು.

ಚೆನ್ನೈ: ನಟಿ ಗೌತಮಿ ತಡಿಮಲ್ಲ ಎಐಎಡಿಎಂಕೆಗೆ ಸೇರ್ಪಡೆ
ಕಳೆದ ವರ್ಷ ಬಿಜೆಪಿ ಜೊತೆಗಿನ ಸಂಬಂಧ ಮುರಿದುಕೊಂಡಿದ್ದ ಜನಪ್ರಿಯ ನಟಿ ಗೌತಮಿ ತಡಿಮಲ್ಲ ಎಐಎಡಿಎಂಕೆಗೆ ಸೇರ್ಪಡೆಯಾಗಿದ್ದಾರೆ.

ಮಹಾರಾಷ್ಟ್ರ: ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸೇರಿದ ಕಾಂಗ್ರೆಸ್ ಮಾಜಿ ನಾಯಕ ಮಿಲಿಂದ್ ದಿಯೋರಾ!
ಕಾಂಗ್ರೆಸ್ ಜೊತೆಗೆ ಮುನಿಸಿಕೊಂಡು ಭಾನುವಾರ ಬೆಳಗ್ಗೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಕೇಂದ್ರದ ಮಾಜಿ ಸಚಿವ ಮಿಲಿಂದ್ ದಿಯೋರಾ, ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣಕ್ಕೆ ಸೇರ್ಪಡೆಯಾಗಿದ್ದಾರೆ.

ರಾಹುಲ್ ಯಾತ್ರೆಯಲ್ಲಿ ಪಾಲ್ಗೊಳ್ಳಲು ಬಿಎಸ್ಪಿಯಿಂದ ಅಮಾನತುಗೊಂಡ ಸಂಸದ ಡ್ಯಾನಿಶ್ ಅಲಿ ನಿರ್ಧಾರ!
ಬಹುಜನ ಸಮಾಜ ಪಕ್ಷದಿಂದ ಅಮಾನತುಗೊಂಡಿರುವ ಲೋಕಸಭಾ ಸಂಸದ ಡ್ಯಾನಿಶ್ ಅಲಿ ಅವರು ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಸೇರುವ ನಿರ್ಧಾರವನ್ನು ಭಾನುವಾರ ಪ್ರಕಟಿಸಿದ್ದಾರೆ.

ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ 'ರಾಮಾಯಣ' ಸೇರ್ಪಡೆ ಸಾಧ್ಯತೆ
ರಾಮಾಯಣ ಮತ್ತು ಮಹಾಭಾರತದಂತಹ ಮಹಾಕಾವ್ಯಗಳನ್ನು ಇತಿಹಾಸದ ಪಠ್ಯಕ್ರಮದ ಭಾಗವಾಗಿ ಶಾಲೆಗಳಲ್ಲಿ ಕಲಿಸಬೇಕು ಎಂದು ಉನ್ನತ ಮಟ್ಟದ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಸಮಿತಿ ಶಿಫಾರಸು ಮಾಡಿದೆ.

ಮಧ್ಯ ಪ್ರದೇಶ: ಭಜರಂಗ ಸೇನೆ ಕಾಂಗ್ರೆಸ್ ನಲ್ಲಿ ವಿಲೀನ, ಬಿಜೆಪಿ ಸೋಲಿಸುವ ಶಪಥ!
ಮಧ್ಯ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ಕೆಲ ತಿಂಗಳುಗಳು ಬಾಕಿಯಿರುವಂತೆಯೇ ಹಿಂದುತ್ವ ಸಂಘಟನೆ ಭಜರಂಗ ಸೇನೆ ಮಂಗಳವಾರ ಕಾಂಗ್ರೆಸ್ ನೊಂದಿಗೆ ವಿಲೀನವಾಗಿದೆ. ಬಿಜೆಪಿ ಜನಾದೇಶ ವಂಚಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಹಾದಿ ತಪ್ಪಿಸಿದೆ ಎಂದು ಆರೋಪಿಸಿದೆ.

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಶೆಟ್ಟರ್ ರಾಜೀನಾಮೆ, ಕಾಂಗ್ರೆಸ್ ಸೇರ್ಪಡೆ
ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ, ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಯಾಗಿದೆ. ನಿನ್ನೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

