ರಾಜ್ಯಜನರ ಶಿಕ್ಷಣ, ಆರ್ಥಿಕ ಸ್ಥಿತಿಗತಿ ಸುಧಾರಿಸುತ್ತಿದ್ದರೂ, ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಹೆಚ್ಚಳ: ಆರಗ ಜ್ಞಾನೇಂದ್ರ
ಶಿಕ್ಷಣ ಮತ್ತು ಆರ್ಥಿಕ ಸ್ಥಿತಿ ಸುಧಾರಿಸಿದಂತೆ ಅಪರಾಧಗಳು ಕಡಿಮೆಯಾಗುತ್ತವೆ ಎಂಬುದು ಒಪ್ಪಬೇಕಾದ ವಿಚಾರ. ಆದರೆ, ಜನರ ಶಿಕ್ಷಣ ಮತ್ತು ಆರ್ಥಿಕ ಸ್ಥಿತಿಗತಿಗಳು ಸುಧಾರಿಸುತ್ತಿದ್ದರೂ, ರಾಜ್ಯದಲ್ಲಿ ಅಪರಾಧ ಪ್ರಮಾಣ ಹೆಚ್ಚಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗುರುವಾರ ರಾಜ್ಯ ವಿಧಾನಸಭೆಯಲ್ಲಿ ಹೇಳಿದರು.