ಸೋಂಕಿತರು

ಚೀನಾದಲ್ಲಿ ಕೋವಿಡ್-19 ಮರಣ ಮೃದಂಗ: ಪ್ರತಿದಿನ 5,000 ಜನರು ಸಾವು, 1 ಮಿಲಿಯನ್ ಸೋಂಕಿತರು?
ಚೀನಾದಲ್ಲಿ ಕೋವಿಡ್-19 ಮರಣ ಮೃದಂಗ ಬಾರಿಸುತ್ತಿದ್ದು, ಪ್ರತಿದಿನ ಸಾಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಕೋವಿಡ್ ನಿಂದ ಪ್ರತಿದಿನ 5,000ಕ್ಕೂ ಹೆಚ್ಚು ಜನರು ಸಾಯುತ್ತಿದ್ದಾರೆ. ಸುಮಾರು 1 ಮಿಲಿಯನ್ ಜನರು ವೈರಸ್‌ನಿಂದ ಸೋಂಕಿಗೆ ಒಳಗಾಗಿದ್ದಾರೆ ಎಂದು ಲಂಡನ್ ಮೂಲದ ಏರ್‌ಫಿನಿಟಿ ಎಂಬ ಆರೋಗ್ಯ ದತ್ತಾಂಶ ಸಂಸ್ಥೆಯು ಅಂದಾಜಿಸಿದೆ.

ಪರೀಕ್ಷೆ ಸಂಖ್ಯೆ ಕಡಿಮೆಯಾಗಿರುವುದೇ ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖವಾಗಲು ಕಾರಣ: ಸಿದ್ದರಾಮಯ್ಯ ಆರೋಪ
ರಾಜ್ಯದಲ್ಲಿ ಕೊರೋನಾ ಪ್ರಕರಣ ಇಳಿಮುಖವಾಗುತ್ತಿದೆ ಎಂದು ರಾಜ್ಯ ಸರ್ಕಾರ ಜನರಲ್ಲಿ ಸುಳ್ಳು ಆಶ್ವಾಸನೆಗಳನ್ನು ತುಂಬುತ್ತಿದೆ. ಕೊರೋನಾ ಪರೀಕ್ಷೆಗಳು ಇಳಿದ ಕಾರಣವೇ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗಿದೆ ಎಂದು ತೋರಿಸುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕೋವಿಡ್ ಮೃತರ ಗೌರವಯುತ ಅಂತ್ಯಸಂಸ್ಕಾರ; ಇತರರಿಗೆ ಮಾದರಿಯಾದ ಬೆಂಗಳೂರು ವಿದ್ಯಾರ್ಥಿನಿಯರು
ಮಹಾಮಾರಿ ಕೊರೋನಾ ಜನರನ್ನು ಮಾನಸಿಕವಾಗಿಯೂ ದೈಹಿಕವಾಗಿಯೂ ದೂರಾಗುವಂತೆ ಮಾಡಿದ್ದು, ಕೊರೊನಾ ಕರಾಳತೆಗೆ ಸಿಲುಕಿ ಮೃತಪಟ್ಟವರ ಅಂತ್ಯಸಂಸ್ಕಾರದಲ್ಲಿ ಸಂಬಂಧಿಕರಿರಲಿ ಸ್ವತಃ ಕುಟುಂಬಸ್ಥರು ಕೂಡ ಭಾಗಿಯಾಗಲು ಹೆದರುವಂತಾಗಿದೆ.

ರಾಜ್ಯದಲ್ಲಿ ಮತ್ತೊಂದು ದುರಂತ: ಆಕ್ಸಿಜನ್ ಕೊರತೆಯಿಂದ ಹುಬ್ಬಳ್ಳಿಯಲ್ಲಿ 5 ಮಂದಿ ಕೊರೋನಾ ರೋಗಿಗಳ ಸಾವು!
ಚಾಮರಾಜನಗರ ಹಾಗೂ ಕಲಬುರಗಿ ಸಂಭವಿಸಿದ ಕೋವಿಡ್ ದುರಂತದ ಬಳಿಕ ಇಂತಹದ್ದೇ ಮತ್ತೊಂದು ದುರಂತ ಹುಬ್ಬಳ್ಳಿಯಲ್ಲಿ ಸಂಭವಿಸಿದೆ. ಆಕ್ಸಿಜನ್ ಕೊರತೆಯಿಂದಾಗಿ ಐವರು ಕೊರೋನಾ ಸೋಂಕಿತರು ಏಕಕಾಲಕ್ಕೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಕಲಬುರಗಿ: ವೆಂಟಿಲೇಟರ್ ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರೂ ಆಸ್ಪತ್ರೆ ಸಿಬ್ಬಂದಿ ಕೊರತೆಯಿಂದಾಗಿ 4 ಸೋಂಕಿತರು ಸಾವು
ದೀರ್ಘಕಾಲಿಕ ರೋಗಗಳಿಂದ ಬಳಲುತ್ತಿದ್ದ ನಾಲ್ವರು ಕೊರೋನಾ ಸೋಂಕಿತರು ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರೂ, ಸಿಬ್ಬಂದಿಗಳ ಕೊರತೆಯಿಂದಾಗಿ ಸಾವನ್ನಪ್ಪಿರುವ ಘಟನೆ ಕಲಬುರಗಿಯ ಆಳಂದ ತಾಲೂಕು ಆಸ್ಪತ್ರೆಯಲ್ಲಿ ಸೋಮವಾರ ನಡೆದಿದೆ.

ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಬೆಂಗಳೂರು ನಗರದಲ್ಲಿಯೇ ಅಧಿಕ: ಪಾಸಿಟಿವ್ ಪ್ರಮಾಣ ಶೇ.12ಕ್ಕೆ ಏರಿಕೆ
ರಾಜ್ಯದಲ್ಲಿ ಕೋವಿಡ್-19 ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವುದರ ಮಧ್ಯೆ ಬೆಂಗಳೂರು ನಗರದಲ್ಲಿಯೇ ಕೊರೋನಾ ಕೇಸುಗಳು ಹೆಚ್ಚಿದ್ದು ಏಪ್ರಿಲ್ ತಿಂಗಳಲ್ಲಿ ಪಾಸಿಟಿವ್ ಪ್ರಕರಣಗಳು ನಗರದಲ್ಲಿ ಶೇಕಡಾ 12ಕ್ಕೆ ಹೆಚ್ಚಳವಾಗಿದೆ.

ಕೊರೋನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲಿ ಮೂರನೇ ಸ್ಥಾನ: ಮಹಾರಾಷ್ಟ್ರ, ದೆಹಲಿ ಮುಂಚೂಣಿಯಲ್ಲಿ!
ಕೊರೋನಾ ಎರಡನೇ ಅಲೆಯ ತೀವ್ರ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿಯೂ ಹೆಚ್ಚಾಗಿದೆ. ಪ್ರತಿದಿನ ಕೊರೋನಾದಿಂದ ಸಾಯುವವರ ಸಂಖ್ಯೆ ಕೂಡ ವಿಪರೀತವಾಗಿದೆ. ನಿನ್ನೆಯ ಲೆಕ್ಕ ತೆಗೆದುಕೊಂಡರೆ ಮಹಾರಾಷ್ಟ್ರ ಮತ್ತು ದೆಹಲಿ ನಂತರ ಕೊರೋನಾದಿಂದ ಮೃತಪಟ್ಟವರಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ.

ದೆಹಲಿ ಜೈಪುರ್ ಗೋಲ್ಡನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ: 20 ಮಂದಿ ಕೊರೋನಾ ರೋಗಿಗಳು ಸಾವು
ದೆಹಲಿಯಲ್ಲಿ ಕೊರೋನಾ ಸೋಂಕಿತರ ಪರಿಸ್ಥಿತಿ ಚಿಂತಾಜನಕವಾಗಿದೆ. ಆಕ್ಸಿಜನ್ ಕೊರತೆ ಹಿನ್ನೆಲೆ ದೆಹಲಿಯ ಜೈಪುರ ಗೋಲ್ಡನ್ ಆಸ್ಪತ್ರೆಯಲ್ಲಿ 20 ರೋಗಿಗಳು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್ ರೋಗಿಗಳಿಗೆ ನೆರವು ನೀಡಲು ಕರ್ನಾಟಕ ರಾಜಕೀಯ ಪಕ್ಷಗಳಿಂದ ಕಾರ್ಯಕರ್ತರು ಸಜ್ಜು!
ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಲೇ ಇದ್ದು, ಸೋಂಕಿತ ಜನರಿಗೆ ವೈದ್ಯಕೀಯ ವ್ಯವಸ್ಥೆ ಕಲ್ಪಿಸುವಲ್ಲಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರಿಗೆ ನೆರವಾಗಲು ರಾಜಕೀಯ ಪಕ್ಷಗಳು ಕಾರ್ಯಕರ್ತರನ್ನು ಸಜ್ಜುಗೊಳಿಸುತ್ತಿವೆ.

