ಸೌತ್ ಫಸ್ಟ್

ಸೌತ್ ಫಸ್ಟ್ ಚುನಾವಣಾ ಪೂರ್ವ ಸಮೀಕ್ಷೆ: ಯಾವ ಕ್ಷೇತ್ರದಲ್ಲಿ ಯಾರಿಗೆ ಗೆಲುವು? ಸಿದ್ದರಾಮಯ್ಯ, ಡಿಕೆಶಿ ಭವಿಷ್ಯ ಏನಾಗಲಿದೆ?
ಈ ಬಾರಿಯ ಬಹುತೇಕ ಸಮೀಕ್ಷೆಗಳು ಅತಂತ್ರ ವಿಧಾನಸಭೆಯ ಸುಳಿವು ನೀಡಿದ್ದು, ಕೆಲ ಸಮೀಕ್ಷೆಗಳು ಕಾಂಗ್ರೆಸ್‌ಗೆ ಬಹುಮತ ಸಿಗಲಿದೆ ಎಂದಿವೆ. ಹೀಗಿರುವಾಗ, ಭಾನುವಾರ ಸಂಜೆ ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆಯ ವರದಿ ಪ್ರಕಟವಾಗಿದ್ದು, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದಿದೆ. ಇದೀಗ ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಉತ್ಸಾಹಕ್ಕೆ ಕಾರಣವಾಗಿದೆ.

ಸೌತ್ ಫಸ್ಟ್ ಚುನಾವಣಾ ಪೂರ್ವ ಸಮೀಕ್ಷೆ: ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ; ಸಿಎಂ ಹುದ್ದೆಗೆ ಸಿದ್ದು ಬೆಸ್ಟ್
ಸೌತ್ ಫಸ್ಟ್-ಪೀಪಲ್ಸ್ ಪಲ್ಸ್ ಸಮೀಕ್ಷೆಯು ಕರ್ನಾಟಕದ ಒಟ್ಟು 224 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 105 ರಿಂದ 117 ಸ್ಥಾನಗಳನ್ನು ಗೆಲ್ಲಬಹುದು ಎಂದು ಯೋಜಿಸಿದೆ. ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ಜನರು ಒಲವು ತೋರಿಸಿದ್ದು, ಸುಲಭವಾಗಿ ಮ್ಯಾಜಿಕ್ ನಂಬರ್ ಅನ್ನು ದಾಟಬಹುದು ಎಂದು ತಿಳಿಸಿದೆ.

