ರಾಜ್ಯಸ್ತ್ರೀ ಶಕ್ತಿ ಸಂಘದಿಂದ ಬ್ಯಾಂಕ್ ಸಿಬ್ಬಂದಿ ಬೈಕಿಗೆ ಬೆಂಕಿ: ಇದು ಸುಳ್ಳು ಸುದ್ದಿ, ಪೊಲೀಸರ ಸ್ಪಷ್ಟನೆ
ಮುಳಬಾಗಿಲು ತಾಲ್ಲೂಕ್ ಬಿಸ್ನಹಳ್ಳಿ ಗ್ರಾಮದಲ್ಲಿ ಸಾಲ ವಸೂಲಿ ಮಾಡಲು ಹೋದ ಡಿಸಿಸಿ ಬ್ಯಾಂಕ್ ಸಿಬ್ಬಂದಿಯ ಬೈಕಿಗೆ ಸ್ತ್ರಿ ಶಕ್ತಿ ಸಂಘದವರು ಬೆಂಕಿ ಹಚ್ಚಿದ್ದಾರೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ, ಇಂತಹ ಯಾವುದೇ ಘಟನೆ ನಡೆದಿಲ್ಲ, ಇದು ಸುಳ್ಳು ಸುದ್ದಿ ಎಂದು ಜಿಲ್ಲಾ ಪೊಲೀಸರು ಸ್ಪಷ್ಟಪಡಿಸಿದ್ದಾರೆ.