ರಾಜ್ಯಶಾಸಕರ ಕಚೇರಿಗೆ ಹೋಗಿ ಕೋವಿಡ್ ಲಸಿಕೆ ಪಡೆಯಲು ಹೇಳುತ್ತಿದ್ದಾರೆ: ರಾಜರಾಜೇಶ್ವರಿ ನಗರ ನಿವಾಸಿಗಳ ಗಂಭೀರ ಆರೋಪ
ಕೋವಿಡ್ ಲಸಿಕೆ ಪಡೆಯಲು ಇಚ್ಛಿಸುವವರು ಸ್ಥಳೀಯ ಶಾಸಕರ ಕಚೇರಿಗೆ ತೆರಳಿ ವೋಟರ್ ಐಡಿ ನೀಡಿ ಲಸಿಕೆ ಪಡೆಯುವಂತೆ ಆರೋಗ್ಯ ಸಿಬ್ಬಂದಿಗಳು ಹೇಳುತ್ತಿದ್ದಾರೆಂದು ರಾಜರಾಜೇಶ್ವರಿ ನಗರ ನಿವಾಸಿಗಳು ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.