ಕ್ರಿಕೆಟ್IPL 2024: ಆರ್ಸಿಬಿ ನಾಯಕ ಫಾಫ್ ಡು ಪ್ಲೆಸಿಸ್, ಪಂಜಾಬ್ ಕಿಂಗ್ಸ್ ನಾಯಕ ಸ್ಯಾಮ್ ಕರಣ್ಗೆ ದಂಡ
ಕೆಕೆಆರ್ ವಿರುದ್ಧ ನೆನ್ನೆ ನಡೆದ ಪಂದ್ಯದಲ್ಲಿ ಸೋಲು ಕಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದ್ದು, ಪಂಜಾಬ್ ಕಿಂಗ್ಸ್ ತಂಡದ ನಾಯಕ ಸ್ಯಾಮ್ ಕರಣ್ ಅವರಿಗೂ ಪಂದ್ಯ ಶುಲ್ಕದ ಶೇ 50ರಷ್ಟು ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಸೋಮವಾರ ಪ್ರಕಟಿಸಿದೆ.