ಸ್ವತಂತ್ರ ಅಭ್ಯರ್ಥಿ

ಚನ್ನಪಟ್ಟಣ ಉಪಚುನಾವಣೆ: ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ- ಯೋಗೇಶ್ವರ್ ಸ್ಪಷ್ಟನೆ
ಚನ್ನಪಟ್ಟಣ ಕ್ಷೇತ್ರದಲ್ಲಿ ನನಗೆ ನನ್ನದೇ ಆದ ಬೆಂಬಲವಿದೆ. ಚುನಾವಣೆ ನಿಲ್ಲಲೇಬೇಕೆಂದು ಕಾರ್ಯಕರ್ತರು ಒತ್ತಡ ಹಾಕಿದ್ದಾರೆ. ಬಹುತೇಕ ಸ್ಪರ್ಧೆ ಮಾಡಲೇಬೇಕು ಎಂದುಕೊಂಡಿದ್ದೇನೆ. ಚಿಹ್ನೆ ಯಾವುದಾದರೂ ಇರಲಿ, ಸ್ಪರ್ಧೆ ಮಾಡುವ ಇಂಗಿತವಿದೆ. ಎಲ್ಲವನ್ನೂ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದೇನೆ.

ಕೈ ತಪ್ಪಿದ ವಿಧಾನ ಪರಿಷತ್ ಟಿಕೆಟ್: ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ರಘುಪತಿ ಭಟ್ ನಿರ್ಧಾರ!
ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಇದೀಗ ವಿಧಾನ ಪರಿಷತ್ ಚುನಾವಣೆ ಕಣ ರಂಗು ಪಡೆದಿದೆ. ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಪಕ್ಷದಿಂದ ಟಿಕೆಟ್ ಸಿಗದ್ದಕ್ಕೆ ಅಸಮಾಧಾನಗೊಂಡಿರುವ ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

'ಮಹದಾಯಿ ಜಲ ವಿವಾದ': ಎತ್ತಿನ ಬಂಡಿ ಏರಿ ಬಂದ ಧಾರವಾಡ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಶಿವಾನಂದ ಮುತ್ತಣ್ಣನವರ್!
ಮುಂಬರುವ ಲೋಕಸಭೆ ಚುನಾವಣೆಗೆ ಧಾರವಾಡ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಶಿವಾನಂದ ಮುತ್ತಣ್ಣನವರ್ ನಿನ್ನೆ ಮಂಗಳವಾರ ಹುಬ್ಬಳ್ಳಿಯಿಂದ ಧಾರವಾಡದವರೆಗೆ ವಿಶಿಷ್ಟ ರ್ಯಾಲಿ ನಡೆಸಿಕೊಂಡು ಹೋಗಿ ಚುನಾವಣಾಧಿಕಾರಿ ಕಚೇರಿಯಲ್ಲಿ ತಮ್ಮ ನಾಮಪತ್ರ ಸಲ್ಲಿಸಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರ: ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ
ರಾಜ್ಯ ಬಿಜೆಪಿ ಬಿ ಎಸ್ ಯಡಿಯೂರಪ್ಪ ಕುಟುಂಬದ ಮುಷ್ಠಿಯಲ್ಲಿದೆ ಎಂದು ಆರೋಪಿಸಿ ಮತ್ತು ತಮ್ಮ ಪುತ್ರ ಕೆ ಇ ಕಾಂತೇಶ್ ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗಲಿಲ್ಲವೆಂದು ಮುನಿಸಿಕೊಂಡು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಇಂದು ಶುಕ್ರವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಅಮಿತ್ ಶಾ ಭೇಟಿಗೆ ಸಿಗದ ಅವಕಾಶ: ಶಿವಮೊಗ್ಗದಲ್ಲಿ ಸ್ಪರ್ಧೆ ಖಚಿತ- ಈಶ್ವರಪ್ಪ
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ತಮ್ಮ ಪುತ್ರನಿಗೆ ಅವಕಾಶ ಸಿಗದಿರುವುದಕ್ಕೆ ಅಸಮಾಧಾನಗೊಂಡು ಬಂಡಾಯ ಸಾರಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಭೇಟಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿರಾಕರಿಸಿದ್ದು, ಇದರೆ ಬೆನ್ನಲ್ಲೇ ಶಿವಮೊಗ್ಗದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿಯುವುದು ಖಚಿತ ಎಂದು ಈಶ್ವರಪ್ಪ ಅವರು ಹೇಳಿದ್ದಾರೆ.

ಏಪ್ರಿಲ್ 12ಕ್ಕೆ ನಾಮಪತ್ರ ಸಲ್ಲಿಕೆ: ಪಕ್ಷೇತರನಾಗಿ ಸ್ಪರ್ಧೆ ಎಂದು ಘೋಷಿಸಿರುವ ಕೆ ಎಸ್ ಈಶ್ವರಪ್ಪ
ಶಿವಮೊಗ್ಗ ಲೋಕಸಭಾ ಕ್ಷೇತ್ರ ಕಣ ರಂಗೇರುತ್ತಿದೆ. ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪನವರು ಬಿಜೆಪಿಯಿಂದ ಬಂಡಾಯವೆದ್ದು ಸ್ವತಂತ್ರವಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ.

ಲೋಕಸಭಾ ಚುನಾವಣೆ: ಟಿಕೆಟ್ ನೀಡದ ಕಾಂಗ್ರೆಸ್, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ವೀಣಾ ಕಾಶಪ್ಪನವರ್ ನಿರ್ಧಾರ!
ಸಂಯುಕ್ತಾ ಪಾಟೀಲ್‌ಗೆ ಕಾಂಗ್ರೆಸ್ ಲೋಕಸಭಾ ಟಿಕೆಟ್ ಸಿಕ್ಕ ಬೆನ್ನಲ್ಲೇ ಬಾಗಲಕೋಟೆಯಲ್ಲಿ ಕಾಂಗ್ರೆಸ್‌ಗೆ ಬಂಡಾಯದ ಬಿಸಿ ತಟ್ಟಿದೆ. ಟಿಕೆಟ್ ನಿರಾಕರಿಸಿದ್ದಕ್ಕೆ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಜಿಪಂ ಮಾಜಿ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಪತ್ನಿ ವೀಣಾ ಕಾಶಪ್ಪನವರ್ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಕುತೂಹಲಕ್ಕೆ ಕೊನೆಗೂ ತೆರೆ: ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಲಖನ್ ಜಾರಕಿಹೊಳಿ ಮುಂದು?
ಬೆಳಗಾವಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಂಗಳವಾರ ಕೊನೆಯ ದಿನವಾಗಿದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಲಖನ್ ಜಾರಕಿಹೊಳಿಯವರು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

ತೆಲಂಗಾಣ: ಮತದಾರರ ಕೈಗೆ ಚಪ್ಪಲಿ ಕೊಟ್ಟು ಹೊಡೆಯಿರಿ ಎಂದ ಅಭ್ಯರ್ಥಿ! ವಿಡಿಯೋ ವೈರಲ್
ಹಣ ನೀಡಿ ಮತ ಕೇಳುವುದು ಸಾಮಾನ್ಯ.. ಆದರೆ ತೆಲಂಗಾಣದಲ್ಲಿ ಓರ್ವ ಅಭ್ಯರ್ಥಿ ಮತದಾರರ ಕೈಗೆ ಚಪ್ಪಲಿ ಕೊಟ್ಟ ಕೆಲಸ ಮಾಡದಿದ್ದರೆ ಇದರಿಂದಲೇ ನನ್ನನ್ನು ಹೊಡೆಯಿರಿ ಎಂದು ಹೇಳುವ ಮೂಲಕ ವಿನೂತನ ರೀತಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ.

