ರಾಜ್ಯಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆಯಿಂದ ಐವರು ಸಾವು ಪ್ರಕರಣ: ಲೋಕಾಯುಕ್ತ ಪೊಲೀಸರಿಂದ ಸ್ವಯಂ ಪ್ರೇರಿತ ಕೇಸು ದಾಖಲು
ಚಿತ್ರದುರ್ಗ ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ವಾಂತಿ-ಬೇಧಿಯಿಂದ ತೀವ್ರ ಅಸ್ವಸ್ಥಗೊಂಡಿದ್ದ ಐವರು ನಾಗರಿಕರು ಮೃತಪಟ್ಟು 41 ಮಂದಿ ತೀವ್ರ ಅಸ್ವಸ್ಥಕ್ಕೀಡಾಗಿರುವ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಸ್ವಯಂ ಪ್ರೇರಿತವಾಗಿ ಕೇಸು ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ.