ರಾಜ್ಯಸಂಚಾರ ದಟ್ಟಣೆ ನಿಯಂತ್ರಣಕ್ಕೆ ಕ್ರಮ: 'ಸ್ವಾರ್ಮ್ ಡ್ರೋನ್ ತಂತ್ರಜ್ಞಾನ' ಬಳಕೆಗೆ ಬೆಂಗಳೂರು ಸಂಚಾರ ಪೊಲೀಸರು ಮುಂದು!
ಬೆಂಗಳೂರಿನ ಸಂಚಾರ ವ್ಯವಸ್ಥೆಯನ್ನು ಉತ್ತಮಗೊಳಿಸಲು ಡಸಾಲ್ಟ್ ಸಿಸ್ಟಮ್ಸ್ ಲಿಮಿಟೆಡ್ ಮತ್ತು ಲಾ ಫೌಂಡೇಶನ್ ಸಹಯೋಗದಲ್ಲಿ ಬೆಂಗಳೂರಿನ ನಿಟ್ಟೆ ಮೀನಾಕ್ಷಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯು ಕೃತಕ ಬುದ್ಧಿಮತ್ತೆ (ಎಐ) ಮತ್ತು ಮಷಿನ್ ಲರ್ನಿಂಗ್ ಅನ್ನು ಬಳಸಿಕೊಂಡು ಸ್ವಾರ್ಮ್ ಡ್ರೋನ್ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದೆ.