ರಾಜ್ಯಕನ್ನಡೇತರರಿಗಾಗಿ ಪ್ರತ್ಯೇಕ ಪಠ್ಯಪುಸ್ತಕ ಮತ್ತು ಪರೀಕ್ಷಾ ವ್ಯವಸ್ಥೆ: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮತ್ತು ಹಂಪಿ ಕನ್ನಡ ವಿವಿ ವಿನೂತನ ಕಾರ್ಯಕ್ರಮ
ಕನ್ನಡೇತರರು ಕರುನಾಡ ಭಾಷೆ ಕನ್ನಡವನ್ನು ಕಲಿಯಲು ಉತ್ತೇಜನ ನೀಡುವ ಸಲುವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮತ್ತು ಹಂಪಿ ಕನ್ನಡ ವಿವಿ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಕನ್ನಡೇತರರಿಗಾಗಿಯೇ ಪ್ರತ್ಯೇಕ ಪಠ್ಯಪುಸ್ತಕ ಮತ್ತು ಪರೀಕ್ಷೆಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಅದಕ್ಕಾಗಿ ಆನ್ ಲೈನ್ ಮಾದರಿಯನ್ನೂ ಸಿದ್ಧಪಡಿಸಲಾಗುವುದು ಎಂದು ತಿಳಿದುಬಂದಿದೆ.