ದೇಶತೇಜಸ್ವಿ ಯಾದವ್ಗೆ ಇಡಿಯಿಂದ ಮತ್ತೆ ಸಮನ್ಸ್: ಜನವರಿ 5ಕ್ಕೆ ವಿಚಾರಣೆಗೆ ಹಾಜರಾಗಲು ಸೂಚನೆ
ಉದ್ಯೋಗಕ್ಕಾಗಿ ರೈಲ್ವೆ ಜಮೀನು ಹಗರಣ ಪ್ರಕರಣದಲ್ಲಿ ಬಿಹಾರದ ಉಪಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್ ಅವರಿಗೆ ಜಾರಿ ನಿರ್ದೇಶನಾಲಯ ಶನಿವಾರ ಮತ್ತೆ ಸಮನ್ಸ್ ಜಾರಿ ಮಾಡಿದ್ದು, ಜನವರಿ 5 ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.