ಹಣ ವರ್ಗಾವಣೆ

ಅಕ್ರಮ ಹಣ ವರ್ಗಾವಣೆ: ಇಡಿಯಿಂದ ಮಧುರೈ ಸಂಸ್ಥೆಯ ರೂ. 207 ಕೋಟಿ ಮೌಲ್ಯದ ಆಸ್ತಿ ಜಪ್ತಿ
ಮಧುರೈ ಮೂಲದ ಸಂಸ್ಥೆಯೊಂದು ನಡೆಸಿದ ವಂಚನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ತಮಿಳುನಾಡಿನಲ್ಲಿರುವ ಅದರ 207 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ಭಾನುವಾರ ತಿಳಿಸಿದೆ.

ಆನ್‌ಲೈನ್ ಹಣದ ವಹಿವಾಟು ಪತ್ತೆ ಹಚ್ಚುವುದು ದೊಡ್ಡ ಸವಾಲು: ಮುಖ್ಯ ಚುನಾವಣಾಧಿಕಾರಿ (ಸಂದರ್ಶನ)
ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ಮಾತನಾಡಿರುವ ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಮನೋಜ್‌ಕುಮಾರ್ ಮೀನಾ ಅವರು ಆನ್‌ಲೈನ್ ಹಣದ ವಹಿವಾಟುಗಳನ್ನು ವಿಶೇಷವಾಗಿ ಯುಪಿಐ (ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್) ಮೂಲಕ ಮಾಡುವ ಬಗ್ಗೆ ನಿಗಾ ಇಡುವುದು ಸವಾಲಿನ ಸಂಗತಿಯಾಗಿದೆ ಎಂದಿದ್ದಾರೆ.

ಪಿಎಂ ಕಿಸಾನ್ ಸಮ್ಮಾನ್: ಬೆಳಗಾವಿಯಿಂದ ದೇಶದ ಎಲ್ಲ ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮೆ ಮಾಡಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಯಲ್ಲಿಂದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗಳಿಗೆ 13ನೇ ಕಂತಿನ ಹಣವನ್ನು ಜಮೆ ಮಾಡಿದರು.

ಬೆಂಗಳೂರು: ಸಂಸ್ಥೆಗೆ ಸೇರಿದ 35 ಲಕ್ಷ ರೂ. ತನ್ನ ಖಾತೆಗೆ ವರ್ಗಾಯಿಸಿಕೊಂಡು ಅಕೌಂಟೆಂಟ್ ಪರಾರಿ
ಕೆಲಸ ಮಾಡುತ್ತಿದ್ದ ಸಂಸ್ಥೆಗೆ ಸೇರಿದ ರೂ.35 ಲಕ್ಷ ಹಣವನ್ನು ತನ್ನ ಬ್ಯಾಂಕ್ ಖಾತೆಗೆ ವರ್ಗಾಯಿಸಿಕೊಂಡ ಅಕೌಂಟೆಂಟ್ ಒಬ್ಬ ಪರಾರಿಯಾಗಿರುವ ಘಟನೆ ನಡೆದಿದೆ.

ಪಿಎಂ ಕಿಸಾನ್ ಸಮ್ಮಾನ್ ನಿಧಿ: ರಾಜ್ಯದ 50 ಲಕ್ಷಕ್ಕೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮೆ-ಸಿಎಂ ಬೊಮ್ಮಾಯಿ
ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ರಾಜ್ಯದ 50 ಲಕ್ಷಕ್ಕೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸಿಇಒ ಹೆಸರಿನಲ್ಲಿ ಹಣ ವರ್ಗಾವಣೆ; ಸೆರಂ ಇನ್ಸ್ಟಿಟ್ಯೂಟ್ ಗೆ 1 ಕೋಟಿ ರೂ. ವಂಚಿಸಿದ ವಂಚಕರು!
ಕೊರೋನಾ ಲಸಿಕೆ ತಯಾರಿಕಾ ಕಂಪನಿ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅದರ್ ಪೂನವಾಲ್ಲಾ ಹೆಸರಿನಲ್ಲಿ ಹಣ ವರ್ಗಾವಣೆ ಮಾಡುವ ಸಂದೇಶ ಕಳುಹಿಸುವ ಮೂಲಕ ವಂಚಕರು 1 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವಂಚಿಸಿದ್ದಾರೆ ಎಂದು ಪುಣೆ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮಹಿಳಾ ಸ್ವ ಸಹಾಯ ಸಂಘಗಳ ಬ್ಯಾಂಕ್ ಖಾತೆಗಳಿಗೆ ರೂ.1,000 ಕೋಟಿ ವರ್ಗಾಯಿಸಿದ ಪ್ರಧಾನಿ ಮೋದಿ
ಮಹಿಳಾ ಸಬಲೀಕರಣ ಗುರಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮಹಿಳಾ ಸ್ವ ಸಹಾಯ ಸಂಘಗಳ ಬ್ಯಾಂಕ್ ಖಾತೆಗಳಿಗೆ ರೂ.1,000 ಕೋಟಿ ರೂಪಾಯಿಯನ್ನು ವರ್ಗಾಯಿಸಿದ್ದಾರೆ. ಇದರಿಂದ ಸ್ವ ಸಹಾಯ ಸಂಘಗಳ ಸುಮಾರು 16 ಲಕ್ಷ ಮಹಿಳಾ ಸದಸ್ಯರಿಗೆ ಪ್ರಯೋಜನವಾಗಲಿದೆ.

ಚೀನಾಗೆ ರಹಸ್ಯ ದಾಖಲೆ ಹಸ್ತಾಂತರ, ಮನಿ ಲಾಂಡರಿಂಗ್ ಕೇಸ್: ಇಡಿಯಿಂದ ಫ್ರೀ ಲ್ಯಾನ್ಸ್ ಪತ್ರಕರ್ತನ ಬಂಧನ
ಚೀನಾದ ಗುಪ್ತಚರ ಅಧಿಕಾರಿಗಳಿಗೆ ಮಾಹಿತಿ ಸೋರಿಕೆ ಮತ್ತು ಸೂಕ್ಷ್ಮ ಮಾಹಿತಿಯನ್ನು ಒದಗಿಸಿದ ಆರೋಪದ ಮೇಲೆ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಮೂಲದ ಫ್ರೀ ಲ್ಯಾನ್ಸ್ ಪತ್ರಕರ್ತನೊಬ್ಬನನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.

ಪೇಟಿಎಂ ಬಳಸಿ 24x7 ನೆಫ್ಟ್ ವರ್ಗಾವಣೆ ಸೌಲಭ್ಯ
ದಿನದ 24 ಗಂಟೆಯೂ ನೆಫ್ಟ್ ಮೂಲಕ ಹಣ ವರ್ಗಾವಣೆ ಮಾಡುವ ಸೌಲಭ್ಯವನ್ನು ಪೇಟಿಎಂ ಒದಗಿಸಿದೆ. ಈ ಮೂಲಕ 24x7 ನೆಫ್ಟ್ ವರ್ಗಾವಣೆ ಸೌಲಭ್ಯ ಒದಗಿಸಿರುವ ದೇಶದ ಮೊದಲ ಸಂಸ್ಥೆ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.

