ಹತ್ಯೆ ಕೇಸ್

ಅಂಜಲಿ ಹತ್ಯೆ ಪ್ರಕರಣ: ಸಂತ್ರಸ್ತೆ ಕುಟುಂಬಕ್ಕೆ ಪರಿಹಾರ ಒದಗಿಸಲು ಕ್ರಮ- ಡಾ. ಜಿ. ಪರಮೇಶ್ವರ್
ಸಾಮಾನ್ಯವಾಗಿ ಹತ್ಯೆ ಪ್ರಕರಣಗಳಲ್ಲಿ ಸರ್ಕಾರಿ ಪರಿಹಾರ ನೀಡಲ್ಲ. ಆದರೆ, ಸಂತ್ರಸ್ತೆ ಕುಟುಂಬದ ತೀವ್ರ ಬಡತನವನ್ನು ಪರಿಗಣಿಸಿ, ಇದನ್ನು ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸೂಕ್ತ ಸಾಕ್ಷ್ಯಧಾರ ಸಂಗ್ರಹದ ನಂತರ ಚಾರ್ಜ್ ಶೀಟ್- ಗೃಹ ಸಚಿವ ಜಿ. ಪರಮೇಶ್ವರ್
ಪವಿತ್ರಗೌಡ ಭೇಟಿ ಮಾಡಿಸುವ ನೆನಪಿನಲ್ಲಿ ಆರೋಪಿಗಳಲ್ಲಿ ಒಬ್ಬನಾದ ಚಿತ್ರದುರ್ಗದ ದರ್ಶನ್ ತೂಗದೀಪ್ ಅಭಿಮಾನಿಗಳ ಸಂಘದ ಅಧ್ಯಕ್ಷ ರಾಘವೇಂದ್ರ, ರೇಣುಕಾಸ್ವಾಮಿಯನ್ನು ಜೂನ್ 8 ರಂದು ರಾಜರಾಜೇಶ್ವರಿನಗರದ ಶೆಡ್ ಗೆ ಕರೆದುಕೊಂಡು ಬಂದಿದ್ದ, ನಂತರ ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಲಾಗಿತ್ತು.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿ ಧನರಾಜ್ ಬಂಧನ!
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಭಾನುವಾರ ಸಂಜೆ ಬಂಧಿಸಿದ್ದಾರೆ.

ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಆಸ್ತಿ ಜಪ್ತಿಗೆ ಎನ್ ಐಎ ಸಜ್ಜು
ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳು ಶರಣಾಗದ ಹಿನ್ನೆಲೆಯಲ್ಲಿ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ಸಿದ್ಧವಾಗಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

ಜಾನುವಾರು ವ್ಯಾಪಾರಿ ಇದ್ರಿಷ್ ಪಾಷ ಹತ್ಯೆ ಪ್ರಕರಣ: ಪುನೀತ್ ಕೆರೆಹಳ್ಳಿ ಹೇಳಿದ್ದು ಹೀಗೆ...
ಕನಕಪುರದ ಸಾತನೂರು ಬಳಿ ಶನಿವಾರ ನಡೆದಿದ್ದ ಜಾನುವಾರು ವ್ಯಾಪಾರಿ ಇದ್ರಿಷ್ ಪಾಷ ಹತ್ಯೆ ಪ್ರಕರಣದಲ್ಲಿ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತಿತರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು,ಅವರ ಬಂಧನಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಮಾಜಿ ಸಂಸದ ಅದಿಕೇಶವಲು ಪುತ್ರನ ವಿರುದ್ಧ ಹತ್ಯೆ ಆರೋಪ: ತನಿಖೆಗೆ ಹೈಕೋರ್ಟ್ ನಿರ್ದೇಶನ
2019ರಲ್ಲಿ ನಡೆದಿದ್ದ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಉದ್ಯಮಿ ಕೆ ರಘುನಾಥ್ ಅವರ ಹತ್ಯೆಗೆ ಸಂಬಂಧಿಸಿದಂತೆ ಮಾಜಿ ಸಂಸದ ಡಿಕೆ ಅದಿಕೇಶವಲು ಮತ್ತಿತರ ವಿರುದ್ಧದ ಆರೋಪ ಕುರಿತು ತನಿಖೆ ನಡೆಸುವಂತೆ ಸಿಬಿಐಗೆ ಹೈಕೋರ್ಟ್ ನಿರ್ದೇಶಿಸಿದೆ.

ಹುಬ್ಬಳ್ಳಿ: ಗ್ರಾಮ ಪಂಚಾಯಿತಿ ಸದಸ್ಯ ಹತ್ಯೆ ಕೇಸ್, ಆರು ಮಂದಿ ಬಂಧನ
ಗ್ರಾಮ ಪಂಚಾಯಿತಿ ಸದಸ್ಯ ದೀಪಕ್ ಪಟದಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ ಹುಬ್ಬಳ್ಳಿ ಪೊಲೀಸರು ಗುರುವಾರ ಆರು ಮಂದಿಯನ್ನು ಬಂಧಿಸುವ ಮೂಲಕ ಪ್ರಕರಣವನ್ನು ಭೇದಿಸಿದ್ದಾರೆ.

