ಹನುಮ ಧ್ವಜ

ಕೆರಗೋಡು: ಆತಂಕ ಸೃಷ್ಟಿಸಿದ ಧ್ವಜಸ್ತಂಭ ತೆರವು ಆದೇಶ; ಮತ್ತೊಂದು ವಿವಾದ ಭುಗಿಲೇಳುತ್ತಿದ್ದಂತೆ ಜಿಲ್ಲಾಡಳಿತದಿಂದ ಸ್ಪಷ್ಟನೆ
ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ವಿವಾದ ಮುಂದುವರಿದಿರುವಾಗಲೇ, 108 ಅಡಿ ಎತ್ತರದ ಧ್ವಜಸ್ತಂಭವನ್ನೂ ತೆರವುಗೊಳಿಸಲು ಜಿಲ್ಲಾಡಳಿತದ ಆದೇಶಿಸಿದೆ ಎನ್ನಲಾದ ಸುದ್ದಿ ಶುಕ್ರವಾರ ಆತಂಕ ಸೃಷ್ಟಿಸಿತ್ತು.

ಲೋಕ ಸಮರ: ಹಳೇ ಮೈಸೂರಿಗೆ ಲಗ್ಗೆ ಇಡಲು ಬಿಜೆಪಿಗೆ 'ಕೆರಗೋಡು' ರಹದಾರಿ; ಕಾಂಗ್ರೆಸ್ ಸರ್ಕಾರದ ಪರಿಸ್ಥಿತಿ 'ಇತ್ತ ಪುಲಿ ಅತ್ತ ದರಿ'!
'ಕಾಂಗ್ರೆಸ್ ಪಾಲಿಗೆ ಇದು ಕಷ್ಟದ ಕಾಲವಾಗಿದೆ, ಮಾತನಾಡಿದರೂ ಕೆಟ್ಟದು, ಮಾತನಾಡದಿದ್ದರೂ ಕೆಟ್ಟದು ಎನ್ನುವಂತಾಗಿದೆ. ಆದರೆ ರಾಷ್ಟ್ರದ ಹಿತದೃಷ್ಟಿಯಿಂದ ಅವರು ಮಾತನಾಡಬೇಕಾಗಿದೆ ಎಂದು ರಾಜಕೀಯ ವಿಶ್ಲೇಷಕ ಬಿ.ಎಸ್.ಮೂರ್ತಿ ಅಭಿಪ್ರಾಯ ಪಟ್ಟಿದ್ದಾರೆ.

ಹನುಮ ಧ್ವಜ ಹಾರಿಸುವವರೆಗೂ ಹೋರಾಟ, ಹನುಮನ ಪರ ಇಡೀ ಮಂಡ್ಯ ನಿಲ್ಲಲಿದೆ: ಆರ್.ಅಶೋಕ
ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ಹಾರಿಸುವವರೆಗೂ ಬಿಜೆಪಿ ಹೋರಾಟ ನಡೆಸಲಿದೆ. ಕಾಂಗ್ರೆಸ್ ಸರ್ಕಾರ ಇನ್ನಷ್ಟು ಕೆದಕಿದರೆ ಇದು ದೇಶವ್ಯಾಪಿ ಹೋರಾಟವಾಗಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದರು.

ಮಂಡ್ಯ ಹನುಮ ಧ್ವಜ ಘರ್ಷಣೆ ವಿವಾದ: ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ, ಹಲವರು ವಶಕ್ಕೆ
ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ ಪ್ರಕರಣ ಖಂಡಿಸಿ ಸೋಮವಾರ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಯುತ್ತಿದೆ.

ಮನೆ-ಮನೆಯಲ್ಲೂ ಹನುಮ ಧ್ವಜ ಹಾರಿಸಿ; ಜನತೆಗೆ ಬಿಜೆಪಿ ಕರೆ
ಮನೆಮನೆಯಲ್ಲೂ ಹನುಮ ಧ್ವಜ ಹಾರಿಸುವ ಅಭಿಯಾನದ ಮೂಲಕ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ವಿರೋಧಿಸಬೇಕು ಎಂದು ಜನತಗೆ ಬಿಜೆಪಿ ಕರೆಕೊಟ್ಟಿದೆ.

