ದೇಶರೈತರ ಪ್ರತಿಭಟನೆ ಬೆಂಬಲಿಸಿ ಜಾನುವಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಹರಿಯಾಣ ಶಾಸಕ ರಾಜೀನಾಮೆ
ಕೇಂದ್ರ ಸರ್ಕಾರ ಹೊಸ ಕೃಷಿ ಕಾಯಿದೆಗಳನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿರುವ ಸಾವಿರಾರು ರೈತರಿಗೆ ತಮ್ಮ ಬೆಂಬಲ ಘೋಷಿಸಿದ ಹರಿಯಾಣ ಶಾಸಕ ಸೋಂಬೀರ್ ಸಾಂಗ್ವಾನ್ ಅವರು ಸೋಮವಾರ ರಾಜ್ಯ ಜಾನುವಾರು ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.