ಹರ್ದೀಪ್ ಸಿಂಗ್ ಪುರಿ

ರಷ್ಯಾದಿಂದಲೇ ತೈಲ ತಂದು, ರಷ್ಯಾಕ್ಕೇ ಪೆಟ್ರೋಲ್ ಮಾರಾಟ...? ಏನಿದು ಭಾರತದ ರಿಫೈನರಿಗಳ ‘ಉಲ್ಟಾ’ ಗೇಮ್? ಕೇಂದ್ರ ಸರ್ಕಾರ ಹೇಳಿದ್ದೇನು..?
ಸುಮಾರು 60,000 ಮೆಟ್ರಿಕ್ ಟನ್ ಪೆಟ್ರೋಲ್ ಈಗಾಗಲೇ ರವಾನೆಯಾಗಿದ್ದು, ಇನ್ನೂ ಎರಡು ಟ್ಯಾಂಕರ್‌ಗಳಲ್ಲಿ ತಲಾ 30,000–40,000 ಟನ್ ಪೆಟ್ರೋಲ್ ಕಳುಹಿಸಲಾಗಿದೆ ಎಂಬ ಮಾಹಿತಿಯೂ ವರದಿಯಾಗಿತ್ತು.

ಶೀಘ್ರದಲ್ಲೇ ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆ? ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?
ಈಗ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ಕುಸಿದಿವೆ. ಆದರೆ ಕಂಪನಿಗಳು ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಸಂದರ್ಭದಲ್ಲಿ ಖರೀದಿಸಿದ ಕಚ್ಚಾ ತೈಲವನ್ನು ಇನ್ನೂ ಸಂಸ್ಕರಿಸುತ್ತಿವೆ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಭಾರತದಲ್ಲಿ LNG, LPG ಪೂರೈಕೆಯಲ್ಲಿ ಕೊರತೆ: ಕತಾರ್ ಇಂಧನ ಸಚಿವರೊಂದಿಗೆ ಹರ್ದೀಪ್ ಸಿಂಗ್ ಪುರಿ ಚರ್ಚೆ; ಇಂಧನ ಸಂಕಷ್ಟಕ್ಕೆ ಮುಕ್ತಿ ಸಿಗುತ್ತಾ?
ಕತಾರ್ ಭಾರತಕ್ಕೆ ವಿಶ್ವಾಸಾರ್ಹ ಇಂಧನ ಪೂರೈಕೆದಾರ ರಾಷ್ಟ್ರವಾಗಿ ಇರಲಿದೆ ಎಂದು ಅವರು ಭರವಸೆ ನೀಡಿದ್ದಾರೆ. ಅಲ್ಲದೇ, ಪಶ್ಚಿಮ ಏಷ್ಯಾದ ಉದ್ವಿಗ್ನತೆಯ ನಡುವೆ ಜಾಗತಿಕ ಮಾರುಕಟ್ಟೆಗಳಲ್ಲಿ ಸ್ಥಿರತೆಗಾಗಿ ಕರೆ ನೀಡಿದ್ದಾರೆ.

ಭಾರತದಲ್ಲಿ ಲಾಕ್‌ಡೌನ್ ವದಂತಿಗಳು ಸಂಪೂರ್ಣ ಸುಳ್ಳು, ಅಂತಹ ಯಾವುದೇ ಪ್ರಸ್ತಾಪವಿಲ್ಲ: ಹರ್ದೀಪ್ ಸಿಂಗ್ ಪುರಿ
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಜಾಗತಿಕ ತೈಲ ಮತ್ತು ಅನಿಲ ಕೊರತೆಯು ಭಾರತದಲ್ಲಿ ಲಾಕ್‌ಡೌನ್ ಸಾಧ್ಯತೆಯ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿರುವ ಸಮಯದಲ್ಲಿ ಪುರಿ ಅವರ ಹೇಳಿಕೆಗಳು ಬಂದಿವೆ.

ವಾಣಿಜ್ಯ ಸಿಲಿಂಡರ್‌ಗಳ ಕೊರತೆ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿಗೆ CM ಸಿದ್ದರಾಮಯ್ಯ ಪತ್ರ
ಸುಮಾರು 50,000 ಸಿಲಿಂಡರ್‌ಗಳ ಬೇಡಿಕೆಯ ನಡುವೆ ರಾಜ್ಯವು ಪ್ರಸ್ತುತ ದಿನಕ್ಕೆ ಕೇವಲ 1,000 ಸಿಲಿಂಡರ್‌ಗಳನ್ನು ಮಾತ್ರ ಪಡೆಯುತ್ತಿದೆ. ಪರಿಣಾಮ ಅನೇಕ ಸಂಸ್ಥೆಗಳು ಮತ್ತು ಹೋಟೆಲ್‌ಗಳು ಮುಚ್ಚುವ ಪರಿಸ್ಥಿತಿ ಎದುರಿಸುತ್ತಿವೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಕುಟುಂಬ ಅಧಿಕಾರದಲ್ಲಿದ್ದಾಗ ಮಾತ್ರ ಸಿಖ್ಖರಿಗೆ ಅಸ್ತಿತ್ವದ ಬೆದರಿಕೆ ಇತ್ತು: ಹರ್ದೀಪ್ ಸಿಂಗ್ ಪುರಿ
ರಾಹುಲ್ ಗಾಂಧಿ ಸತ್ಯವನ್ನು ತಿಳಿಯದೆ ಮಾತನಾಡುತ್ತಾರೆ. ಅವರ ಹೇಳಿಕೆಯಲ್ಲಿ ಅಪಾಯಕಾರಿ ನಿರೂಪಣೆ ಇದೆ. ನಮ್ಮ ಏಕತೆ ಮತ್ತು ವೈವಿಧ್ಯತೆಗೆ ಸಂಬಂಧಿಸಿದ ಕೆಲವು ಸೂಕ್ಷ್ಮಗಳನ್ನು ಅವರು ಅರ್ಥ ಮಾಡಿಕೊಳ್ಳಬೇಕು.

ಪೆಟ್ರೋಲ್, ಡೀಸೆಲ್ ದರ ಏರಿಕೆ: ಕರ್ನಾಟಕ ಸರ್ಕಾರದ ವಿರುದ್ಧ ಹರ್ದೀಪ್ ಸಿಂಗ್ ಪುರಿ ವಾಗ್ದಾಳಿ
ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಮಾಡಿರುವ ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಭಾನುವಾರ ವಾಗ್ದಾಳಿ ನಡೆಸಿದ್ದಾರೆ.

ಕೇಜ್ರಿವಾಲ್ ಪತ್ನಿಯನ್ನು ಬಿಹಾರ ಮಾಜಿ ಸಿಎಂ ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ
ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಶುಕ್ರವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿಯನ್ನು ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿಗೆ ಹೋಲಿಸಿದ್ದಾರೆ ಮತ್ತು ಅವರು (ಸುನೀತಾ ಕೇಜ್ರಿವಾಲ್) ಬಹುಶಃ ತಮ್ಮ ಪತಿಯ (ಕೇಜ್ರಿವಾಲ್) ಹುದ್ದೆಯನ್ನು ಅಲಂಕರಿಸಲು ತಯಾರಿ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದ ಪೆಟ್ರೋಲ್ ಬಂಕ್‌ಗಳಲ್ಲಿ ಇನ್ಮುಂದೆ ಇಂಧನ ಬೆಲೆಗಳು ಕನ್ನಡದಲ್ಲೂ ಪ್ರದರ್ಶನ!
ಕರ್ನಾಟಕದ ಪೆಟ್ರೋಲ್ ಬಂಕ್‌ಗಳಲ್ಲಿ ಜನವರಿ 10ರಿಂದ ದರ ಪಟ್ಟಿ ಕನ್ನಡದಲ್ಲೂ ಇರುತ್ತದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.

