ಭಕ್ತಿ-ಜ್ಯೋತಿಷ್ಯಊರ ತುಂಬಾ ಕೆಂಪು ಬಿಳಿ ಶೇಡಿ ಕೆಮ್ಮಣ್ಣಿನ ಅವತಾರ: ಮಲೆನಾಡಿನ ಹವ್ಯಕರಲ್ಲಿ ದೀಪಾವಳಿ ಆಚರಣೆ
ಹವ್ಯಕ ಜನಾಂಗದಲ್ಲಿ ದೀಪಾವಳಿ ಹಬ್ಬ ಎಂದು ಕರೆಯುವ ವಾಡಿಕೆ ಇಲ್ಲ. ಚೌತಿ ಹಬ್ಬ (ಗಣೇಶ ಚತುಥಿ೯) ಮಾನೋ೯ಮಿ ಹಬ್ಬ ಅಥವಾ ನವರಾತ್ರಿ ಹಬ್ಬ ( ದಸರಾ ಹಬ್ಬ) ದೊಡ್ಡಬ್ಬ (ದೀಪಾವಳಿ ಹಬ್ಬ) ಹೀಗೆ ತಮ್ಮದೆ ಶೈಲಿಯಲ್ಲಿ ಹಬ್ಬಗಳನ್ನು ಕರೆಯುವ ವಾಡಿಕೆ ಅನಾದಿ ಕಾಲದಿಂದ ನಡೆದುಕೊಂಡು ಬಂದಿದೆ. ಹಾಗೂ ಈ ಹಬ್ಬಗಳನ್ನು ಆಚರಿಸುವ ರೀತಿ ಕೂಡಾ ವಿಭಿನ್ನ.