ರಾಜ್ಯಟಿಕೆಟ್ ವಂಚನೆ ಪ್ರಕರಣ: ಹಾಲಶ್ರೀ ಜಾಮೀನು ಆದೇಶವನ್ನು ಅ.16ಕ್ಕೆ ಕಾಯ್ದಿರಿಸಿದ ನ್ಯಾಯಾಲಯ
ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿ ಸಲ್ಲಿಸಿರುವ ಜಾಮೀನು ಅರ್ಜಿಯ ಆದೇಶವನ್ನು ಅಕ್ಟೋಬರ್ 16ಕ್ಕೆ ಪ್ರಕಟಿಸುವುದಾಗಿ ನ್ಯಾಯಾಲಯ ಬುಧವಾರ ಹೇಳಿದೆ.