ರಾಜ್ಯಬೆಂಗಳೂರು: ಕೋವಿಡ್ ಲಸಿಕೆ ಪಡೆಯಲು ಗರ್ಭಿಣಿ, ಬಾಣಂತಿಯರು ಮುಂದು!
ಕೋವಿಡ್ ಲಸಿಕೆ ಪಡೆದುಕೊಳ್ಳಲು ಗರ್ಭಿಣಿಯರು ಹಾಗೂ ಹಾಲುಣಿಸುವ ತಾಯಿಯಂದಿರು ಹಿಂಜರಿಯುತ್ತಿದ್ದ ಬೆಳವಣಿಗೆಗಳು ಕಡಿಮೆಯಾಗುತ್ತಿದ್ದು, ನಿಧಾನಗತಿಯಲ್ಲಿ ಲಸಿಕೆ ಪಡೆದುಕೊಳ್ಳಲು ಮುಂದಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಗಾರಿಗಳು ಲಸಿಕೆ ಅಭಿಯಾನವನ್ನು ವಿಸ್ತರಿಸಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.