ರಾಜ್ಯಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ: ಬಸವರಾಜ ಬೊಮ್ಮಾಯಿ
ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚಿಸಿರುವ ಆರೋಪ ಎದುರಿಸುತ್ತಿರುವ ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ತಿಳಿಸಿದ್ದಾರೆ.