ರಾಜ್ಯಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗಾಗಿ 100 ಹೊಸ ಹಾಸ್ಟೆಲ್ ತೆರೆಯಲು ಸರ್ಕಾರ ಚಿಂತನೆ
ಹಿಂದುಳಿದ ಸಮುದಾಯಗಳ ಮಕ್ಕಳಿಗೆ ಹೆಚ್ಚಿನ ಹಾಸ್ಟೆಲ್ಗಳ ಬೇಡಿಕೆ ಇರುವುದರಿಂದ ಹೆಚ್ಚಿನ ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸಲು 100 ಹೊಸ ಹಾಸ್ಟೆಲ್ಗಳನ್ನು ತೆರೆಯಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಶೈಕ್ಷಣಿಕ ಕೇಂದ್ರಗಳಾದ ಮಂಗಳೂರು, ಉಡುಪಿ, ಧಾರವಾಡ ಮತ್ತು ಇತರ ಜಿಲ್ಲಾ ಕೇಂದ್ರಗಳಲ್ಲಿ ಹಾಸ್ಟೆಲ್ಗಳನ್ನು ತೆರೆಯಲು ಸರ್ಕಾರ ಚಿಂತನೆ ನಡೆಸಿದೆ