ರಾಜಕೀಯಜಾತಿ ರಾಜಕೀಯ: ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಹಿಂದುಳಿದ ವರ್ಗದ ನಾಯಕನಿಗೆ ಮಣೆ ಹಾಕುತ್ತದೆಯೇ ಬಿಜೆಪಿ ಹೈಕಮಾಂಡ್?
ವೀರಶೈವ ಲಿಂಗಾಯತ ಸಮುದಾಯದ ಮುಖಂಡ ಬಿಜೆಪಿ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಪುತ್ರ ಶಿಕಾರಿಪುರ ಕ್ಷೇತ್ರದ ಶಾಸಕ ಬಿ ವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಿದ ನಂತರ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಯಾರನ್ನು ಹೈಕಮಾಂಡ್ ಆಯ್ಕೆ ಮಾಡುತ್ತದೆ ಎಂಬುದು ಕುತೂಹಲ ಕೆರಳಿಸಿದೆ.