ರಾಜ್ಯಭಜರಂಗದಳ ಕಾರ್ಯಕರ್ತ ಹರ್ಷನನ್ನು ಕೊಂದ ಹಂತಕರು ಹಿಂದೂ ದ್ವೇಷಿಗಳು- ಎನ್ ಐಎ
ಶಿವಮೊಗ್ಗದಲ್ಲಿ ಫೆಬ್ರವರಿಯಲ್ಲಿ ನಡೆದಿದ್ದ ಭಜರಂಗ ದಳ ಕಾರ್ಯಕರ್ತ ಹರ್ಷನನ್ನು ಕೊಲೆ ಮಾಡಿದ ಆರೋಪಿಗಳು ಹಿಂದೂ ಸಮುದಾಯದ ಬಗ್ಗೆ ದ್ವೇಷವನ್ನು ಬೆಳೆಸಿಕೊಂಡಿದ್ದರು. ಹರ್ಷವನ್ನು ಕೊಲ್ಲುವಾಗ ಭಜರಂಗ ದಳ ಕಾರ್ಯಕರ್ತರ ವಿರುದ್ಧ ಘೋಷಣೆ ಕೂಗಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಇತ್ತೀಚಿಗೆ ವಿಶೇಷ ಕೋರ್ಟ್ ಗೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಹೇಳಿದೆ.