ಹಿಜಾಬ್ ನಿಷೇಧ

ವಿಎಚ್‌ಪಿ ಸಭೆಯಲ್ಲಿ ಹಿಜಾಬ್ ನಿಷೇಧ ಎತ್ತಿಹಿಡಿದಿದ್ದ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ಭಾಗಿ
ಹಿಜಾಬ್ ನಿಷೇಧ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದಿದ್ದ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ಭಾನುವಾರ ನಡೆದ ವಿಎಚ್‌ಪಿ ಸಭೆಯಲ್ಲಿ ಭಾಗವಹಿಸಿದ್ದರು.

ಮುಂಬೈ: ಕಾಲೇಜು ಕ್ಯಾಂಪಸ್ ನಲ್ಲಿ ಹಿಜಾಬ್ ನಿಷೇಧಿಸುವ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!
ಕ್ಯಾಂಪಸ್‌ನೊಳಗೆ 'ಹಿಜಾಬ್, ಬುರ್ಖಾ, ಕ್ಯಾಪ್ ಮತ್ತು ನಖಾಬ್' ನಿಷೇಧಿಸುವ ಮುಂಬೈ ಕಾಲೇಜಿನ ಸುತ್ತೋಲೆಗೆ ನ್ಯಾಯಾಲಯ ಭಾಗಶಃ ತಡೆ ನೀಡಿದೆ.

ಇಸ್ಲಾಂನಲ್ಲಿ ಹಿಜಾಬ್ ಕಡ್ಡಾಯವಲ್ಲ: ಕಾಲೇಜಿನಲ್ಲಿ ಹಿಜಾಬ್ ನಿಷೇಧವನ್ನು ಎತ್ತಿಹಿಡಿದ ಬಾಂಬೆ ಹೈಕೋರ್ಟ್!
ಇಸ್ಲಾಂನಲ್ಲಿ ನಂಬಿಕೆಯಿರುವ ವಿದ್ಯಾರ್ಥಿನಿಯರು ಹಿಜಾಬ್ ಅಥವಾ ನಿಖಾಬ್ ಧರಿಸುವುದು ಅನಿವಾರ್ಯವಲ್ಲ ಎಂದು ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪನ್ನು ಉಲ್ಲೇಖಿಸಲಾಗಿತ್ತು.

ಹಿಜಾಬ್ ನಿಷೇಧ ಹಿಂತೆಗೆದುಕೊಳ್ಳದ ರಾಜ್ಯ ಸರ್ಕಾರಕ್ಕೆ ಓವೈಸಿ ತರಾಟೆ; ಆದೇಶ ಹೊರಡಿಸಲು ಕೇವಲ 30 ನಿಮಿಷ ಸಾಕು
ಅಧಿಕಾರಕ್ಕೆ ಬಂದು ಏಳು ತಿಂಗಳು ಕಳೆದರೂ ರಾಜ್ಯದಲ್ಲಿ ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುವ ಆದೇಶವನ್ನು ಹೊರಡಿಸದ ಕರ್ನಾಟಕ ಸರ್ಕಾರವನ್ನು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಹಿಜಾಬ್, ಧಾರ್ಮಿಕ ವಿಷಯಗಳೇ ಬಿಜೆಪಿಗೆ ಅಸ್ತ್ರ; ಕಾಂಗ್ರೆಸ್‌ಗೆ ಮುಳುವಾಗುತ್ತಾ ಸಿಎಂ ಹೇಳಿಕೆ?
ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಹಿಜಾಬ್ ಧರಿಸುವುದಕ್ಕೆ ಹೇರಲಾಗಿರುವ ನಿಷೇಧವನ್ನು ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಇದೀಗ ವಿವಾದ ಕೇಂದ್ರಬಿಂದುವಾಗಿದೆ. ಈ ವಿಚಾರ ಇಲ್ಲಿಗೆ ಮುಗಿಯದೆ, 2024ರ ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಹೋರಾಟಕ್ಕೆ ನಾಂದಿ ಹಾಡಿರುವಂತಿದೆ.

ಹಿಜಾಬ್ ನಿಷೇಧ ಹಿಂಪಡೆಯುವ ಕುರಿತು ಸಿದ್ದರಾಮಯ್ಯ ಹೇಳಿಕೆ ಹಿಂದೆ ರಾಹುಲ್ ಗಾಂಧಿ ಪ್ರಭಾವವಿದೆ: ಪ್ರಲ್ಹಾದ ಜೋಶಿ
ಹಿಜಾಬ್ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆ ಖಂಡನೀಯ. ಯಾರೂ ಅದನ್ನು ನಿಷೇಧಿಸಿಲ್ಲ ಎಂದು ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಭಾನುವಾರ ಹೇಳಿದ್ದಾರೆ.

ಹಿಜಾಬ್ ಮೇಲಿನ ನಿಷೇಧ ಹಿಂಪಡೆಯುವ ಕುರಿತು ಚರ್ಚಿಸಿ ನಿರ್ಧಾರ: ಸಿಎಂ ಸಿದ್ದರಾಮಯ್ಯ ಯೂಟರ್ನ್
ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಮತ್ತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಸ್ಪಷ್ಟಪಡಿಸಿದ್ದಾರೆ.

ಹಿಜಾಬ್ ನಮ್ಮ ಹಕ್ಕು, ಇನ್ಮುಂದೆ ಸಹೋದರ- ಸಹೋದರಿಯರಂತೆ ಬಾಳೋಣ: ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್
ಹಿಜಾಬ್ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳುವ ಸಿಎಂ ಸಿದ್ದರಾಮಯ್ಯನವರ ಘೋಷಣೆಗೆ ಪ್ರತಿಕ್ರಿಯಿಸಿದ ಮಂಡ್ಯ ಜಿಲ್ಲೆಯ ವಿದ್ಯಾರ್ಥಿ ಹಾಗೂ 'ಜೈ ಶ್ರೀ ರಾಮ್' ಎಂದು ಘೋಷಣೆ ಕೂಗಿದ ಗುಂಪಿನ ವಿರುದ್ಧ 'ಅಲ್ಲಾ ಹು ಅಕ್ಬರ್' ಎಂದು ಘೋಷಣೆ ಕೂಗಿದ್ದ ಮುಸ್ಕಾನ್, 'ಹಿಜಾಬ್' ಧರಿಸುವುದು ನಮ್ಮ ಹಕ್ಕು ಮತ್ತು ಇನ್ನ್ಮುಂದೆ ನಾವು ಸಹೋದರ ಸಹೋದರಿಯರಂತೆ ಬದುಕೋಣ' ಎಂದಿದ್ದಾರೆ.

ಹಿಜಾಬ್ ಮೇಲಿನ ನಿಷೇಧ ತೆರವು: 'ಇತರರು ಕೇಸರಿ, ನೀಲಿ, ಹಳದಿ ಶಾಲು ಬಳಸಲು ಕೇಳಬಹುದು' ಎಂದ ಸಿಟಿ ರವಿ
ಕಾಂಗ್ರೆಸ್ ಸರ್ಕಾರವು ಹಿಜಾಬ್ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳುವುದಾಗಿ ಹೇಳಿರುವುದು ಶಾಲಾ-ಕಾಲೇಜುಗಳಲ್ಲಿ ಅಶಾಂತಿ ಉಂಟಾಗುವ ಸಾಧ್ಯತೆಗಳನ್ನು ಸೂಚಿಸುತ್ತದೆ. ಹಿಜಾಬ್ ಧರಿಸಲು ಅವಕಾಶ ನೀಡಿದರೆ, ಇತರರು ಕೂಡ ಕೇಸರಿ ಮತ್ತು ಇತರ ಬಣ್ಣದ ಶಾಲುಗಳನ್ನು ಧರಿಸಲು ಬಯಸುತ್ತಾರೆ ಎಂದು ಬಿಜೆಪಿ ನಾಯಕ ಸಿಟಿ ರವಿ ಶನಿವಾರ ಹೇಳಿದ್ದಾರೆ.

