ರಾಜ್ಯಶಾಲಾ-ಕಾಲೇಜುಗಳಲ್ಲಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗಳಿಗೆ ಹೋಗಲು ಯತ್ನಾಳ್ ಕರೆ!
ಹಿಜಾಬ್ ನಿಷೇಧ ಆದೇಶವನ್ನು ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡುತ್ತಿದ್ದಂತೆಯೇ, ರಾಜ್ಯದಲ್ಲಿ ಮತ್ತೆ ಹಿಜಾಬ್ ವಿವಾದ ತಾರಕಕ್ಕೇರಿದೆ. ಮತ್ತೊಂದೆಡೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗಳಲ್ಲಿ ಭಾಗವಹಿಸಲು ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಕರೆ ನೀಡಿದ್ದಾರೆ.