ಬಾಲಿವುಡ್ಹೃದಯಾಘಾತ: ಬಾಲಿವುಡ್ ಹಿರಿಯ ಚಿತ್ರ ನಿರ್ದೇಶಕ ರಾಜ್ ಕುಮಾರ್ ಕೊಹ್ಲಿ ನಿಧನ
ಬಾಲಿವುಡ್ ಹಿರಿಯ ಚಿತ್ರ ನಿರ್ದೇಶಕ ರಾಜ್ ಕುಮಾರ್ ಕೊಹ್ಲಿ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಇಂದು ಬೆಳಗ್ಗೆ ಅವರಿಗೆ ಹೃದಯಾಘಾತ ಕಾಣಿಸಿಕೊಂಡಿದ್ದು, ಬಳಿಕ ಮೃತಪಟ್ಟಿದ್ದಾರೆ. ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.