ರಾಜ್ಯಬೆಳಗಾವಿ: ಬೈಲಹೊಂಗಲದಲ್ಲಿ ಹಿರಿಯ ನಟ ಶಿವರಂಜನ್ ಮೇಲೆ ಶೂಟೌಟ್; ಪ್ರಾಣಾಪಾಯದಿಂದ ಪಾರು
ಕನ್ನಡ ಚಿತ್ರರಂಗದ ಹಿರಿಯ ನಟ, ಉದ್ಯಮಿ ಶಿವರಂಜನ್ ಬೋಳಣ್ಣವರ ಮೇಲೆ ಗುಂಡಿನ ದಾಳಿ ಯತ್ನ ನಡೆದಿದೆ. ಬೆಳಗಾವಿಯ ಬೈಲಹೊಂಗಲ ಪಟ್ಟಣದಲ್ಲಿರುವ ಶಿವರಂಜನ್ ಬೋಳಣ್ಣವರ್ ಮನೆ ಎದುರು ನಿನ್ನೆ ರಾತ್ರಿ 7.54ರ ಸುಮಾರಿಗೆ ಬಂದಿದ್ದ ದುಷ್ಕರ್ಮಿಗಳು ಗುಂಡು ಹಾರಿಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಶಿವರಂಜನ್ ಪಾರಾಗಿದ್ದಾರೆ.