ಹುದ್ದೆಗಳು

ನಿಗಮ-ಮಂಡಳಿಗಳಲ್ಲಿ ಹುದ್ದೆಗಳ ಭರ್ತಿ: ಕಾಂಗ್ರೆಸ್ ನಲ್ಲಿ ಆಕಾಂಕ್ಷಿಗಳಿಂದ ಲಾಬಿ
ರಾಜ್ಯದಲ್ಲಿ ನೂತನ ಕಾಂಗ್ರೆಸ್ ಸರ್ಕಾರದ ಬಜೆಟ್ ಮಂಡನೆ ಬಳಿಕ ವಿವಿಧ ಮಂಡಳಿ ಮತ್ತು ನಿಗಮಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ನಡೆಯಲಿದೆ ಎಂದು ಕಾಂಗ್ರೆಸ್ ಇತ್ತೀಚೆಗೆ ಸುಳಿವು ನೀಡಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಿ ಆಗಿರುವುದರಿಂದ ಜಿಲ್ಲೆಯಾದ್ಯಂತ ಪ್ರಮುಖ ಸ್ಥಾನಗಳಿಗೆ ಲಾಬಿ ಮುಂದುವರಿದಿದೆ.

ಗಡಿ ಭಾಗದ ಚೆಕ್ ಫೋಸ್ಟ್ ಗಳಲ್ಲಿ ಖಾಲಿಯಿರುವ ಹುದ್ದೆಗಳು ಶೀಘ್ರ ಭರ್ತಿ: ಶ್ರೀರಾಮುಲು
ರಾಜ್ಯದ ಗಡಿ ಭಾಗದಲ್ಲಿ ಸಾರಿಗೆ ಇಲಾಖೆಯಿಂದ ಅಳವಡಿಸಿರುವ 15 ಚೆಕ್ ಪೋಸ್ಟ್ ಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕೆಪಿಎಸ್ ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಆದಷ್ಟು ಬೇಗ ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಮೇಲ್ಮನೆಗೆ ಸ್ಪಷ್ಟಪಡಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ 2 ತಿಂಗಳ ಕಾಲಾವಕಾಶ: ಪ್ರಭು ಚವ್ಹಾಣ್
ಕೋವಿಡ್ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪಶುಸಂಗೋಪನೆ ಇಲಾಖೆಯ ಪಶುವೈದ್ಯಕೀಯ ಸಹಾಯಕ ಮತ್ತು ಪರೀಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಇನ್ನೂ 2 ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಆರ್ಥಿಕ ಇಲಾಖೆ ಒಪ್ಪಿಗೆ ನೀಡುತ್ತಿದ್ದಂತೆಯೇ ಖಾಲಿ ಹುದ್ದೆಗಳ ಭರ್ತಿ: ಕೃಷಿ ಸಚಿವ ಬಿ.ಸಿ. ಪಾಟೀಲ್
ಆರ್ಥಿಕ ಇಲಾಖೆಯಿಂದ ಹುದ್ದೆ ಭರ್ತಿಗೆ ಒಪ್ಪಿಗೆ ಸಿಗುತ್ತಿದ್ಧಂತೆಯೇ ಆದಷ್ಟು ಬೇಗ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗವುದು ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಕೃಷಿ ಸಚಿವ ಬಿ. ಸಿ. ಪಾಟೀಲ್ ತಿಳಿಸಿದ್ದಾರೆ.

ವಿವಿಧ ವೃಂದಗಳ ಅಗ್ನಿಶಾಮಕ ಸಿಬ್ಬಂದಿಯ 1567 ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ವಿವಿಧ ವೃಂದಗಳ ಅಗ್ನಿಶಾಮಕ ಸಿಬ್ಬಂದಿಯ 1567 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಸಚಿವಾಲಯಗಳಿಗೆ ಸೂಚನೆ- ಜೀತೇಂದ್ರ ಸಿಂಗ್
ಬ್ಯಾಕ್ ಲಾಗ್ ಹುದ್ದೆಗಳನ್ನು ಗುರುತಿಸಲು ಸದನ ಸಮಿತಿಯನ್ನು ಸ್ಥಾಪಿಸುವಂತೆ ಎಲ್ಲಾ ಸಚಿವಾಲಯಗಳು ಹಾಗೂ ಇಲಾಖೆಗಳಿಗೆ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಸೂಚನೆ ನೀಡಿದ್ದು, ಇಂತಹ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಹೇಳಿದೆ.

ಪೊಲೀಸ್ ಇಲಾಖೆಯಲ್ಲಿ 25 ಸಾವಿರ ಹುದ್ದೆ ಖಾಲಿ
ರಾಜ್ಯ ಪೊಲೀಸ್ ಇಲಾಖೆಯಲ್ಲಿ ವಿವಿಧ ಶ್ರೇಣಿಯ ಒಟ್ಟು 25 ಸಾವಿರದ 749 ಪೊಲೀಸ್ ಹುದ್ದೆಗಳು ಖಾಲಿಯಿವೆ ಎಂದು...

