ಹುಬ್ಬಳ್ಳಿ ವಿಮಾನ ನಿಲ್ದಾಣ

ಹುಬ್ಬಳ್ಳಿ ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಇ-ಮೇಲ್: ದೂರು ದಾಖಲು
ವಿಮಾನ ನಿಲ್ದಾಣ ನಿರ್ದೇಶಕ ರೂಪೇಶ್ ಕುಮಾರ್ಗೆ ಅನಾಮಧೇಯ ವ್ಯಕ್ತಿಯೊಬ್ಬನಿಂದ ಇ-ಮೇಲ್ ಮೂಲಕ ಜೀವಬೆದರಿಕೆ ಸಂದೇಶ ಬಂದಿದೆ.

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು: ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳಿಗೆ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ ಹೆಸರಿಡಲು ಸರ್ಕಾರ ಚಿಂತನೆ
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮ ಹೆಸರಿಡಬೇಕು ಎಂಬ ಬೇಡಿಕೆಗಳನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದು ಸಚಿವ ಎಂಬಿ ಪಾಟೀಲ್ ಬುಧವಾರ ವಿಧಾನಸಭೆಗೆ ತಿಳಿಸಿದರು.

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಪತ್ರ ಬರೆದಿದ್ದ ಒಂಬತ್ತನೇ ತರಗತಿ ಬಾಲಕಿ!
ಕುಂದಗೋಳ ತಾಲೂಕಿನ ಮಳಲಿ ಗ್ರಾಮದ ಶ್ರೀ ಜಗದ್ಗುರು ಫಕ್ಕೀರೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿ ಓದುತ್ತಿರುವ ಆಶಾ ಪಾಟೀಲ ಅವರು ಶನಿವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಲಾಘವ ಮಾಡಿದ್ದು ವಿಶೇಷವಾಗಿತ್ತು.

ಹುಬ್ಬಳ್ಳಿ ವಿಮಾನ ನಿಲ್ದಾಣ ವಿಸ್ತರಣೆಗೆ ಕೇಂದ್ರ ಸರ್ಕಾರದಿಂದ 273 ಕೋಟಿ ರೂ. ಅನುದಾನ!
ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ವಿಸ್ತೃತ ಟರ್ಮಿನಲ್ ಕಟ್ಟಡ, ರನ್‌ವೇ ಮತ್ತು ಏಪ್ರನ್ ಮತ್ತು ಇತರ ಪ್ರಯಾಣಿಕರ ಸೌಲಭ್ಯಗಳೊಂದಿಗೆ ನವೀಕರಿಸಲು 273 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಕೇಂದ್ರದ ರಾಷ್ಟ್ರೀಯ ನಗದೀಕರಣ ಯೋಜನೆ: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅವಕಾಶಗಳ ಮಹಾಪೂರ!
ಕೇಂದ್ರದ ಮೋದಿ ಸರ್ಕಾರದ ರಾಷ್ಟ್ರೀಯ ನಗದೀಕರಣ ಯೋಜನೆಯಿಂದಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅವಕಾಶಗಳ ಮಹಾಪೂರವೇ ಹರಿದುಬರುವ ಸಾಧ್ಯತೆ ಇದೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸೌರ ವಿದ್ಯುತ್ ಘಟಕ: ಏಪ್ರಿಲ್ ಹೊತ್ತಿಗೆ ಕಾರ್ಯಾರಂಭ
ಇನ್ನು ಮೂರ್ನಾಲ್ಕು ತಿಂಗಳಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸೌರ ವಿದ್ಯುತ್ ಘಟಕ ತಲೆಯೆತ್ತಲಿದೆ. 8 ಮೆಗಾವ್ಯಾಟ್ ಸಾಮರ್ಥ್ಯದ ಸೌರವಿದ್ಯುತ್ ಘಟಕವನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸುವ ಮೂಲಕ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಸ್ಥಾಪಿಸಲಾಗುವುದು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಐಎಲ್ಎಸ್, ವರ್ಷಾಂತ್ಯಕ್ಕೆ ಲ್ಯಾಂಡಿಂಗ್ ಹೆಚ್ಚು ಸರಾಗ ಮತ್ತು ಸುರಕ್ಷಿತ
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ಸ್ಥಾಪಿಸಲಾದ ಇನ್ಸ್ಟ್ರುಮೆಂಟ್ ಲ್ಯಾಂಡಿಂಗ್ ಸಿಸ್ಟಮ್(ಐಎಲ್ಎಸ್) ಈ ವರ್ಷದ ಅಂತ್ಯದ ವೇಳೆಗೆ ಕಾರ್ಯನಿರ್ವಹಿಸಲಿದ್ದು, ಇನ್ನು ಮುಂದೆ ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲೂ ಸುಲಭವಾಗಿ ಮತ್ತು ಸುರಕ್ಷಿತವಾಗಿ ವಿಮಾನವನ್ನು ಲ್ಯಾಂಡ್ ಮಾಡಬಹುದು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಎಚ್ ಡಿಕೆ, ಡಿಕೆಶಿ ಭೇಟಿ, ಮರು ಮೈತ್ರಿ ವದಂತಿಗೆ ಪುಷ್ಠಿ
ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಸೋಮವಾರ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಅನಿರೀಕ್ಷಿತವಾಗಿ ಭೇಟಿ ಮಾಡಿದ್ದು, ಕಾಂಗ್ರೆಸ್ - ಜೆಡಿಎಸ್ ಮರು ಮೈತ್ರಿಯ ವದಂತಿಗೆ ಮತ್ತಷ್ಟು ಪುಷ್ಟಿ ನೀಡಿದೆ.

