ರಾಜ್ಯಕೊಡಗು: ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಕಾಫಿ ಎಸ್ಟೇಟ್ನಲ್ಲಿ ಶವವಾಗಿ ಪತ್ತೆ
ಕೊಡಗು ಜಿಲ್ಲೆಯ ವಿರಾಜಪೇಟೆ ವ್ಯಾಪ್ತಿಯ ಕಾಫಿ ಎಸ್ಟೇಟ್ನಲ್ಲಿ ಹುಲಿಯೊಂದು ಸತ್ತು ಬಿದ್ದಿರುವುದು ಪತ್ತೆಯಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಹುಲಿ ಮೇಲಿನ ಗಾಯಗಳಿಂದಾಗಿ ಅದು ಇನ್ನೊಂದು ಹುಲಿಯೊಂದಿಗೆ ನಡೆದ ಕಾದಾಟದಲ್ಲಿ ಪ್ರಾಣಬಿಟ್ಟಿರುವ ಶಂಕೆ ವ್ಯಕ್ತವಾಗಿದೆ ಎಂದು ಅವರು ಹೇಳಿದರು.