ರಾಜಕೀಯಆರ್ ಆರ್ ನಗರದಲ್ಲಿ ಕಾಂಗ್ರೆಸ್ ಬೆಂಬಲಿತ ಒಕ್ಕಲಿಗ ಮತದಾರರ ಹೆಸರು ಡಿಲೀಟ್: ಸಂಸದ ಡಿ.ಕೆ ಸುರೇಶ್ ದೂರು
ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಬೆಂಬಲಿತ ಒಕ್ಕಲಿಗ ಸಮುದಾಯದ ಮತದಾರರನ್ನು ಗುರಿಯಾಗಿಸಿಕೊಂಡು ಡಿಲೀಟ್ ಮಾಡಲಾಗಿದೆ ಎಂದು ಸಂಸದ ಡಿ.ಕೆ.ಸುರೇಶ್ ಆರೋಪಿಸಿದ್ದಾರೆ.