ದೇಶಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗದಲ್ಲಿ ಸೋನಿಯಾ ಗಾಂಧಿ ಹೆಸರಿನ ಫಲಕ ಮಾಯಾ!
ರೋಹ್ಟಂಗ್ನ ಅಟಲ್ ಸುರಂಗದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಹೆಸರಿದ್ದ ಫಲಕವನ್ನು ಕಿತ್ತು ಹಾಕಲಾಗಿದ್ದು, ಇದರಿಂದ ಸಿಡಿಮಿಡಿಗೊಂಡಿರುವ ಹಿಮಾಚಲ ಪ್ರದೇಶ ಕಾಂಗ್ರೆಸ್ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದೆ.