ಹೇಮಂತ್ ನಿಂಬಾಳ್ಕರ್

IMA ಹಗರಣ: ಐಪಿಎಸ್ ಅಧಿಕಾರಿ ಹೇಮಂತ್ ಎಂ ನಿಂಬಾಳ್ಕರ್ ವಿರುದ್ಧ ಸಿಬಿಐ ತನಿಖೆ ಮುಂದುವರಿಕೆಗೆ ಟಿಜೆ ಅಬ್ರಹಾಂ ಮನವಿ
ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಶ್ರೇಣಿಯ ಅಧಿಕಾರಿಯಾಗಿರುವ ನಿಂಬಾಳ್ಕರ್, ರಾಜ್ಯ ಗುಪ್ತಚರ ಮುಖ್ಯಸ್ಥರಾಗಿದ್ದಾರೆ. ಅಲ್ಲದೇ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರೂ ಆಗಿದ್ದಾರೆ.

ಪರೇಶ್ ಮೇಸ್ತಾ ಸಾವು ಪ್ರಕರಣ ಮತ್ತೆ ಮುನ್ನೆಲೆಗೆ: ಅಂಜಲಿಗೆ ಬಿಸಿ, ಹೇಮಂತ್ ನಿಂಬಾಳ್ಕರ್ ವಿರುದ್ಧ ಬಿಜೆಪಿ ಆರೋಪ
2018ರ ಪರೇಶ್ ಮೇಸ್ತಾ ಸಾವಿನ ಪ್ರಕರಣ 2024ರ ಚುನಾವಣೆಯಲ್ಲಿ ಮತ್ತೆ ಮುನ್ನೆಲೆಗೆ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಮತ್ತು ಅವರ ಪತಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಪತ್ನಿ ಅಂಜಲಿ ನಿಂಬಾಳ್ಕರ್‌ಗೆ ಕಾಂಗ್ರೆಸ್ ಟಿಕೆಟ್; ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆಗೆ ಬಿಜೆಪಿ ಒತ್ತಾಯ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉತ್ತರ ಕನ್ನಡದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸುತ್ತಿರುವ ಅಂಜಲಿ ನಿಂಬಾಳ್ಕರ್ ಅವರ ಪತಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು ಮತ್ತು ಅವರನ್ನು ಚುನಾವಣೆ ಸಂಬಂಧಿತ ಎಲ್ಲ ಕೆಲಸಗಳಿಂದ ಮುಕ್ತಗೊಳಿಸುವಂತೆ ಬಿಜೆಪಿ ಬುಧವಾರ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

ಸರ್ಕಾರಕ್ಕೆ ಮುಜುಗರ ತಂದಿದ್ದ ಡಿ.ರೂಪಾ, ನಿಂಬಾಳ್ಕರ್ ಸೇರಿ 8 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರಕ್ಕೆ ಮುಜುಗರ ತಂದಿಟ್ಟಿದ್ದ ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿ 8 ಮಂದಿ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಷದ ಕೊನೆಯ ದಿನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಐಎಂಎ ಹಗರಣ: ಹಿರಿಯ ಐಪಿಎಸ್ ಅಧಿಕಾರಿ ನಿಂಬಾಳ್ಕರ್, ಅಜಯ್ ಹಿಲೋರಿ ಸೇರಿ 8 ಮಂದಿಯನ್ನು ಬುಕ್ ಮಾಡಿದ ಸಿಬಿಐ
4,000 ಕೋಟಿ ರೂ.ಐ-ಮಾನಿಟರಿ ಅಡ್ವೈಸರಿ (ಐಎಂಎ) ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕರ್ನಾಟಕ ಕೇಡರ್ ಹಿರಿಯ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್ ಹಿಲೋರಿ ಮತ್ತು ಇತರೆ 8 ಮಂದಿಯನ್ನು ಬುಕ್ ಮಾಡಿದೆ.

ಐಎಂಎ ಹಗರಣ: ನಿಂಬಾಳ್ಕರ್ ನಿವಾಸ ಸೇರಿ 15 ಸ್ಥಳಗಳ ಮೇಲೆ ಸಿಬಿಐ ದಾಳಿ
ಬಹುಕೋಟಿ ಐಎಂಎ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಹಿರಿಯ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್, ಅಜಯ್ ಹಿಲೋರಿ ನಿವಾಸಗಳು ಸೇರಿದಂತೆ 15 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದೆ.

ಐಎಂಎ ವಂಚನೆ ಪ್ರಕಣ: ಸಿಬಿಐಯಿಂದ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವಿಚಾರಣೆ
ಐಎಂಎ ಬಹುಕೋಟಿ ವಂಚನೆ ಪ್ರಕರಣ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ತನಿಖೆಗೊಳಪಡಿಸಿದ್ದಾರೆ.

ಎತ್ತಿಗೆ ಜ್ವರ-ಎಮ್ಮೆಗೆ ಬರೆ: ರಾಜಿನಾಮೆ ನಿರ್ಧಾರ ಬದಲಿಸದ ಅಂಜಲಿ: ಶಾಸಕಿ ಪತಿ ಟಾರ್ಗೆಟ್ ಮಾಡಿದ ದೋಸ್ತಿ ಸರ್ಕಾರ
ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ರಾಜಿನಾಮೆ ನೀಡುವ ನಿರ್ಧಾರದಿಂದ ಹಿಂದೆ ಸರಿಯದ ಕಾರಣ ದೋಸ್ತಿ ಸರ್ಕಾರ ಶಾಸಕಿ ಪತಿಯನ್ನು ಟಾರ್ಗೆಟ್ ...

ಭ್ರಷ್ಟಾಚಾರ ನಿಗ್ರಹ ದಳದ ಐಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕಾರ
ಎಸಿಬಿ(ಭ್ರಷ್ಟಾಚಾರ ನಿಗ್ರಹ ದಳ) ಐಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.

