ರಾಜ್ಯರೈತ ಮುಖಂಡ ರಾಕೇಶ್ ಟಿಕಾಯತ್ಗೆ ಮಸಿ: ನ್ಯಾಯಾಲಯಕ್ಕೆ ಪೊಲೀಸರಿಂದ ದೋಷಾರೋಪ ಪಟ್ಟಿ ಸಲ್ಲಿಕೆ
ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಮೇಲೆ ನಗರದಲ್ಲಿ ನಡೆದಿದ್ದ ಸಭೆಯಲ್ಲಿ ಮಸಿ ಬಳಿದು ಹಲ್ಲೆ ನಡೆಸಿದ್ದ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಹೈಗ್ರೌಂಡ್ಸ್ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.