ರಾಜ್ಯಚಾಮರಾಜನಗರ: ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ, ಇಬ್ಬರು ಸಾವು
ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡಾಲ್ ಬಳಿ ಶನಿವಾರ ನಡೆದಿದೆ. ಲಾರಿ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.