ರಾಜ್ಯಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ಆಸ್ಪತ್ರೆಗೆ ಕರೆದೊಯ್ಯಲು ನಕಾರ: ಹೊಯ್ಸಳ ಸಿಬ್ಬಂದಿ ವಿರುದ್ಧ ಜನಾಕ್ರೋಶ, ತನಿಖೆಗೆ ಆದೇಶ
ಶ್ರೀನಗರದ ನಿವಾಸಿ ರಾಹುಲ್ ಗೌಡ ಗಾಯಗೊಂಡಿದ್ದು, ಕಳೆದ ಸೋಮವಾರ ರಾತ್ರಿ ಯಶವಂತಪುರ ಸಮೀಪ ಆತನ ಬೈಕ್ ಅಪಘಾತಕ್ಕೀಡಾಗಿತ್ತು. ಆಗ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲು ಹೊಯ್ಸಳ ಸಿಬ್ಬಂದಿ ನಿರಾಕರಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ.