ರಾಜ್ಯರಾಜ್ಯದ ಹೊಯ್ಸಳ ದೇವಾಲಯಗಳು ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆ: ದೇಶಕ್ಕೆ ಮತ್ತಷ್ಟು ಹೆಮ್ಮೆ ಎಂದ ಪ್ರಧಾನಿ
ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹೊಯ್ಸಳ ದೇವಾಲಯಗಳನ್ನು ಸೇರ್ಪಡೆ ಮಾಡಲಾಗಿದೆ. ಕರ್ನಾಟಕದ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಪ್ರಸಿದ್ಧ ಹೊಯ್ಸಳ ದೇವಾಲಯಗಳನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೊ) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲಾಗಿದೆ.