ಹೊಸ ವರ್ಷ

ಹೊಸ ವರ್ಷದಂದು ಕಂಠಪೂರ್ತಿ ಕುಡಿದು ಕಾರು ಚಾಲನೆ: ಜನರ ಮೇಲೆ ಕಾರು ಹತ್ತಿಸಿದ ಭೂಪ, ನಾಲ್ವರಿಗೆ ಗಾಯ
ಮದ್ಯದ ಅಮಲಿನಲ್ಲಿ ಅತಿವೇಗ ಮತ್ತು ನಿರ್ಲಕ್ಷ್ಯದಿಂದ ವಾಹನ ಓಡಿಸುತ್ತಿದ್ದ ಸಿಂಗ್ ನಿಯಂತ್ರಣ ಕಳೆದುಕೊಂಡು ಮೊದಲು ಪಾದಚಾರಿಗಳ ದಾರಿಯಲ್ಲಿ ಅಳವಡಿಸಿದ್ದ ಕಬ್ಬಿಣದ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದಿದ್ದಾನೆ.

ವಂಗಾ ನಿರ್ದೇಶನದ Spirit ಚಿತ್ರದ ಫಸ್ಟ್ ಲುಕ್: ಪ್ರಭಾಸ್ ರಗಡ್ ಲುಕ್ ಗೆ ಅಭಿಮಾನಿಗಳು ಫಿದಾ!
ರಣಬೀರ್ ಕಪೂರ್ ಅವರ 'ಅನಿಮಲ್' ಮತ್ತು ಶಾಹಿದ್ ಕಪೂರ್ ಅವರ 'ಕಬೀರ್ ಸಿಂಗ್' ಚಿತ್ರಗಳಿಗೆ ಹೆಸರುವಾಸಿಯಾದ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ, 2026ರ ಮೊದಲ ದಿನದಂದು ತಮ್ಮ ಮುಂಬರುವ ಚಿತ್ರ 'ಸ್ಪಿರಿಟ್' ನ ಫಸ್ಟ್ ಲುಕ್ ಅನಾವರಣಗೊಳಿಸಿದರು.

ಹೊಸ ವರ್ಷ-ಹೊಸ ಹುರುಪು: ಈ ವರ್ಷವೂ ಸುದ್ದಿ ಮಾಡುವ ವಿಷಯಗಳು ಯಾವುವು ಗೊತ್ತಾ..?
ಹೊಸ ವರ್ಷ ಆರಂಭವಾಗಿದ್ದು, ಈ ಸಂದರ್ಭದಲ್ಲಿ 2026ರಲ್ಲಿ ಕರ್ನಾಟಕ ರಾಜ್ಯದ ಅಭಿವೃದ್ಧಿ, ಮೂಲಸೌಕರ್ಯ ಮತ್ತು ಆಡಳಿತಾತ್ಮಕ ಕ್ಷೇತ್ರಗಳಲ್ಲಿ ಹಲವು ಮಹತ್ವದ ಯೋಜನೆಗಳು ಹಾಗೂ ನಿರ್ಧಾರಗಳು ಜಾರಿಗೆ ಬರಲಿವೆ.

New year 2026: ನಗರದಾದ್ಯಂತ ಸಂಭ್ರಮಾಚರಣೆ; ಅಲ್ಲಲ್ಲಿ ಯುವಕರ ಪುಂಡಾಟ; ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ!
ದೆಹಲಿ, ಅಹಮದಾಬಾದ್, ಕೋಲ್ಕತ್ತಾ ಸೇರಿದಂತೆ ದೇಶದ ಹಲವು ಪ್ರಮುಖ ನಗರಗಳಲ್ಲಿ ಪಟಾಕಿ ಸಿಡಿಸಿ ಹೊಸ ವರ್ಷವನ್ನು ಸ್ವಾಗತಿಸಲಾಯಿತು.

ಹೊಸ ವರ್ಷ ಸಂಭ್ರಮಾಚರಣೆ: ಮದ್ಯ ಸೇವನೆ ಮಾಡಿದವರಿಗೆ ಡ್ರಾಪ್ ವ್ಯವಸ್ಥೆ; ಚರ್ಚೆಗೆ ಗ್ರಾಸ!
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಯ ದಿನ ಮದ್ಯಸೇವನೆ ಮಾಡಿದರವರನ್ನು ಡ್ರಾಪ್ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಪರಮೇಶ್ವರ್ ಅವರು ಹೇಳಿದ್ದರು. ಈ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ.

ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜು: ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಬಿಗಿ ಬಂದೋಬಸ್ತ್, ಫ್ಲೈಓವರ್'ಗಳು ಬಂದ್
ಎರಡು ರಸ್ತೆಗಳ ಮೇಲಿನ ಕಣ್ಣಾವಲಿಗೆ ಪ್ರತ್ಯೇಕ ಸಿಸಿಟಿವಿ ನಿಯಂತ್ರಣ ಕೊಠಡಿ ತೆರೆಯಲಾಗಿದ್ದು, ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್ ಗಳಲ್ಲಿ ಸುಮಾರು 3,400 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

Watch | ಬೆಟ್ಟಿಂಗ್ ಕಂಪನಿ ಕೇಸ್: ಶಾಸಕ ವೀರೇಂದ್ರ ಪಪ್ಪಿಗೆ ಬಿಗ್ ರಿಲೀಫ್; New Year: ನಮ್ಮ ಮೆಟ್ರೋ ಸೇವೆ ಅವಧಿ ವಿಸ್ತರಣೆ; ಒತ್ತುವರಿ ಮಾಡಿದವರಿಗೆ ಗಿಫ್ಟ್ ಕೊಡೋಕಾಗುತ್ತಾ?

ಹೊಸ ವರ್ಷಾಚರಣೆ: ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ನೋ ಎಂಟ್ರಿ
ಡಿಸೆಂಬರ್ 31, 2025 ರಂದು ಮಧ್ಯಾಹ್ನ 2 ರಿಂದ ಜನವರಿ 1, 2026 ರಂದು ಬೆಳಿಗ್ಗೆ 10 ಗಂಟೆಯವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ರವೀಂದ್ರ ಅವರು ಆದೇಶ ಹೊರಡಿಸಿದ್ದಾರೆ.

ಹೊಸ ವರ್ಷ: ನಮ್ಮ ಮೆಟ್ರೋ ಸೇವೆಗಳ ಅವಧಿ ವಿಸ್ತರಣೆ- BMRCL
ಎಂಜಿ ರಸ್ತೆ ಪ್ರದೇಶದಲ್ಲಿ ಹೆಚ್ಚಿನ ಜನಸಂದಣಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ, ಡಿಸೆಂಬರ್ 31 ರಂದು ರಾತ್ರಿ 10 ಗಂಟೆಯಿಂದ ಎಂಜಿ ರಸ್ತೆ ಮೆಟ್ರೋ ನಿಲ್ದಾಣದ ಪ್ರವೇಶ ಮತ್ತು ನಿರ್ಗಮನವನ್ನು ಮುಚ್ಚಲಾಗುತ್ತದೆ.

